ಉಳ್ಳಾಲ: ರಾಜ್ಯ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಶಿರಾಡಿ ಘಾಟ್ ಸಮೀಪ ಸಕಲೇಶಪುರದ ಬಳಿ ಅಪಘಾತಕ್ಕೀಡಾಗಿದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧಿಕೃತ ನಿವಾಸದಲ್ಲಿ ನಡೆದ್ದ ನಿಗಮ ಮಂಡಳಿಗಳ ಅಧ್ಯಕ್ಷರ ಸಭೆಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಅವರು, ಗುರುವಾರ ಬೆಳಗ್ಗೆ ಮಂಗಳೂರಿನಿಂದ ಹೊರಟಿದ್ದರು. ಲ ಸಕಲೇಶಪುರ ಜಂಕ್ಷನ್ ನಲ್ಲಿ ಕಾರಿನ ಮುಂದಿನಿಂದ ಚಲಿಸುತ್ತಿದ್ದ ಬೈಕನ್ನು ಸವಾರ ಏಕಾಏಕಿ ಬಲಗಡೆ ತಿರುಗಿಸಿದ್ದು, ಈ ಸಂದರ್ಭ ಅಪಘಾತ ತಪ್ಪಿಸುವ ಸಲುವಾಗಿ ಚಾಲಕ ಕಾರನ್ನು ತಿರುಗಿಸಿದಾಗ ನಿಯಂತ್ರಣ ತಪ್ಪಿ ರಸ್ತೆಬದಿ ಅಳವಡಿಸಲಾಗಿದ್ದ ಹೊಟೇಲೊಂದರ ನಾಮಫಲಕಕ್ಕೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಕಾರಿನ ಒಂದು ಬದಿಗೆ ಅಲ್ಪ ಪ್ರಮಾಣದಲ್ಲಿ ಹಾನಿಯಾಗಿದೆ. ರವೀಂದ್ರ ಶೆಟ್ಟಿ ಮತ್ತು ಕಾರು ಚಾಲಕ ಅಪಾಯದಿಂದ ಪಾರಾಗಿದ್ದು, ಬೇರೊಂದು ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.