ಜಿಲ್ಲೆ

ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಿ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ಕೃತಜ್ಞತಾ ಭಾವವನ್ನು ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಯಾಗಬೇಕು ಎಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಹೇಳಿದರು.

ನಗರದ ಕರ್ನಾಟಕ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಕೋಶವು ಕವಿವಿ ಗಾಂಽ ಭವನದಲ್ಲಿ ಆಯೋಜಿಸಿದ್ದ ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದ ನಾಯಕತ್ವದ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.

ಸಮಯವನ್ನು ಗೌರವಿಸಿ, ಗುರಿ ಇಟ್ಟುಕೊಂಡು ಓದಿ. ಸ್ವಂತಿಕೆ ಬೆಳೆಸಿಕೊಳ್ಳಿ, ನಿಮ್ಮ ಸಾಮರ್ಥ್ಯವನ್ನು ಅರಿತುಕೊಳ್ಳಿ. ಹೊಸದನ್ನು ಕಲಿಯಲು ಪ್ರಯತ್ನಿಸಿ. ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದರು.

ಕವಿವಿ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಎಂ.ಜಿ. ಖಾನ್ ಮಾತನಾಡಿ, ವಿದ್ಯಾರ್ಥಿಗಳು ಪ್ರಜಾಪ್ರಭುತ್ವ ಮತ್ತು ಕಾನೂನು ತಿಳಿದುಕೊಳ್ಳಬೇಕು ಎಂದರು.

ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವ ಡಾ. ಎ. ಚೆನ್ನಪ್ಪ, ಕವಿವಿ ಎನ್‌ಎಸ್‌ಎಸ್ ಕೋಶದ ಸಂಯೋಜಕ ಡಾ. ಎಂ.ಬಿ. ದಳಪತಿ, ಪ್ರೊ. ಎಂ.ಜಿ. ಖಾನ್, ಡಾ. ಬಿ.ಎಂ. ರತ್ನಾಕರ, ಡಾ. ಎಂ. ಯರಿಸ್ವಾಮಿ, ಡಾ. ಎಸ್.ಎ. ಕೋಳೂರ, ಡಾ. ಎಸ್.ಎಸ್. ದೊಡಮನಿ ಹಾಗೂ ಎನ್‌ಎಸ್‌ಎಸ್ ಸ್ವಯಂ ಸೇವಕರು ಇದ್ದರು.