ಹುಬ್ಬಳ್ಳಿ: ಇಲ್ಲಿಯ ಅನುರಾಗ ಸಂಗಮ ಸಂಗೀತ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಸಿದ್ದಾರೂಢರ ಜಾತ್ರಾ ಮಹೋತ್ಸವ ಅಂಗವಾಗಿ ಆರೂಢ ಕಾಲನಿಯಲ್ಲಿ ಕರೊಕೆ ಸಂಗೀತ ರಸಮಂಜರಿ ಹಾಗೂ ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ಜಗದ್ಗುರು ರಂಭಾಪುರೀಶ ಸಾಂಸತಿಕ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಹಿರೇಗೌಡರ ಮಾತನಾಡಿ, ಸಂಗೀತ ಹಾಗೂ ನಾಟಕ ಮನಸ್ಸನ್ನು ಉಲ್ಲಸಿತಗೊಳಿಸುವ ಶಕ್ತಿ ಹೊಂದಿವೆ ಎಂದರು.
ಅತಿಥಿಗಳಾಗಿದ್ದ ಹಿರಿಯರಾದ ಹುಚ್ಚಪ್ಪ ರೂಗಿ ಮಾತನಾಡಿ, ಸಂಗೀತ ಕಾರ್ಯಕ್ರಮ ಆಯೋಜಿಸುವ ಇಂತಹ ಸಂಸ್ಥೆಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ ಎಂದರು.
ಗುತ್ತಿಗೆದಾರರ ಸಂಘದ ಮಾಜಿ ಅಧ್ಯಕ್ಷ ಶಿವಾಜಿ ವೈದ್ಯ ಹಾಗೂ ಜಿಲ್ಲಾ ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ತುಷಾರ್ ಬುದ್ಧಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಅನುರಾಗ ಸಂಗಮ ಸಂಸ್ಥೆಯ ಅಧ್ಯಕ್ಷ ಬಸವರಾಜ ಸಜ್ಜನ, ಕಾರ್ಯಕ್ರಮದ ವೈಶಿಷ್ಟ್ಯತೆ ವಿವರಿಸಿದರು.
ಮಲ್ಲನಗೌಡ ಪಾಟೀಲ ಮುಂತಾದರು ಉಪಸ್ಥಿತರಿದ್ದರು. ರೂಪ ಸೋಮಶೇಖರ ಕಾರ್ಯಕ್ರಮ ನಿರೂಪಿಸಿದರು. ಕೆ.ಐ. ಸ್ವಾಯಿ ಸ್ವಾಗತಿಸಿದರು.