ಜಿಲ್ಲೆ

ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾದುದು

Uttara Kannada - Subash Hegde

ಕಾರವಾರ: ವ್ಯಕ್ತಿಯ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾದುದು ಎಂದು ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ ಹೇಳಿದರು.

ಬಾಡ ಶಿವಾಜಿ ಪ್ರೌಢ ಶಾಲಾ ಸಭಾಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ, ಭಾರತೀಯ ಸ್ಟೇಟ್ ಬ್ಯಾಂಕ್, ಕೆನರಾ ಬ್ಯಾಂಕ್, ಕೆಡಿಸಿಸಿ ಬ್ಯಾಂಕ್ ಕಾರವಾರ ಶಾಖೆ, ಅಂಕೋಲಾ ಅರ್ಬನ್ ಕೋ.ಅಪರೇಟಿವ್ ಬ್ಯಾಂಕ್ ಕಾರವಾರ ಶಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ವ್ಯಕ್ತಿಯೂ ಭವಿಷ್ಯದಲ್ಲಿ ಉನ್ನತ ಸ್ಥಾನ ಪಡೆಯಲು ಹಾಗೂ ಸಮಾಜದಲ್ಲಿ ಉತ್ತಮ ಜೀವನ ಸಾಗಿಸುವಲ್ಲಿ ಶಿಕ್ಷಕರು ನೀಡುವ ಶಿಕ್ಷಣ ಪ್ರಮುಖ ಕಾರಣವಾಗಲಿದೆ ಎಂದರು.

ನಗರಸಭೆ ಸದಸ್ಯ ಪಾಂಡುರoಗ ಎಸ್. ರೇವಂಡಿಕರ್ ಅಧ್ಯಕ್ಷತೆ ವಹಿಸಿದ್ದರು. ಸೇಂಟ್ ಜೋಸೆಫ್ ಪಪೂ ಕಾಲೇಜ್‌ನ ಪ್ರಾಂಶುಪಾಲ ಡಾ.ಸ್ಟಾ÷್ಯನಿ ಪಿಂಟೋ ಆಧುನಿಕ ಶಿಕ್ಷಣದಲ್ಲಿ ತಂತ್ರಜ್ಞಾನ ಬಳಕೆ ಕುರಿತು ಉಪನ್ಯಾಸ ನೀಡಿದರು. ಅಸ್ನೋಟಿ ಶಿವಾಜಿ ವಿದ್ಯಾ ಮಂದಿರ ಹೈಸ್ಕೂಲ್ ನಿವೃತ್ತ ಮುಖ್ಯಾಧ್ಯಾಪಕ ದಿನೇಶ್ ಗಾವಂಕರ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ವ್ಯವಸ್ಥಾಪಕ ವಿವೇಕ ವಿ. ಜನ್ನು, ಕೆನರಾ ಬ್ಯಾಂಕ್ ಸಹಾಯಕ ವ್ಯವಸ್ಥಾಪಕಿ ಪ್ರಿಯದರ್ಶಿನಿ ಸಾಳುಂಕೆ, ರಾಹುಲ್ ಸಾವಂತ್, ಅಂಕೋಲಾ ಅರ್ಬನ್ ಕೋ-ಅಪರೇಟಿವ್ ಬ್ಯಾಂಕ್ ನಿರ್ದೇಶಕ ಸಂತೋಷ್ ಬಂಡಿಕಟ್ಟೆ, ಶಿವಾಜಿ ವಿದ್ಯಾಸಂಸ್ಥೆಯ ಸದಸ್ಯ ಶಂಕರ ಬಾಬಿ ಸಾವಂತ, ಪ್ರಾಥಮಿಕ ಶಾಲಾ, ಶಿಕ್ಷಣ ಸಂಘದ ಅಧ್ಯಕ್ಷ ಆರ್.ಪಿ ಗೌಡ, ಪ್ರೌಢ ಶಾಲಾ ಸಹ ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀದೇವಿ ಕೆರೆಮನೆ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಜೈ ರಂಗನಾಥ, ಮುಖ್ಯಾಧ್ಯಾಪಕರ ಸಂಘದ ಕಾರ್ಯದರ್ಶಿ ಉಮೇಶ ದೊಡ್ಡಮನಿ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಂ.ಜಿ ಕುಂಶಿ, ಶಿವಾಜಿ ವಿದ್ಯಾ ಸಂಸ್ಥೆಯ ಮುಖ್ಯಾಧ್ಯಪಕ ಆರ್ ಎಸ್ ನಾಯ್ಕ, ಜಿಲ್ಲಾ ಮುಖ್ಯೋದ್ಯಾಪಕರ ಸಂಘದ ಅಧ್ಯಕ್ಷ ಸಂದೀಪ್ ರಾಣೆ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುಧಾಕರ ಗುನಗಿ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುಚೇತಾ ಕೊಡ್ಕಣಿ ವೇದಿಕೆಯಲ್ಲಿದ್ದರು.

ಬಿಇಒ ಉಮೇಶ್ ನಾಯ್ಕ ಸ್ವಾಗತಿಸಿದರು, ಶಿಕ್ಷಕರಾದ ವನೀತಾ ಶೇಟ್ ಮತ್ತು ವಿಕಾಸ ಕೋಠಾರಕರ್ ನಿರೂಪಿಸಿದರು. ದೈಹಿಕ ಶಿಕ್ಷಣ ಪರೀವಿಕ್ಷಕ ವಿಠೋಬಾ ನಾಯ್ಕ ವಂದಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.