ವಿರಾಜಪೇಟೆ:
ಇಂದಿನ ಇಂಟರ್ನೆಟ್ ಯುಗದಲ್ಲಿ ಕೆಲ ಸಮಯವಾದರೂ ವಿದ್ಯಾರ್ಥಿಗಳು ಗ್ರಂಥಾಲಯದ ಮೊರೆ ಹೋಗಬೇಕು. ಸಾಹಿತ್ಯ ಸಂಬAಧಿತ ಪುಸ್ತಕಗಳನ್ನು ಓದಬೇಕು ಎಂದು ಗಾಳಿಬೀಡು ನವೋದಯ ವಿದ್ಯಾಲಯದ ಉಪನ್ಯಾಸಕರೂ ಆದ ಸಾಹಿತಿ ಮಾರುತಿ ದಾಸಣ್ಣನವರ್ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸÀರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿರಾಜಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ನಾ. ಡಿಸೋಜಾ ಮಕ್ಕಳ ಸಾಹಿತ್ಯ ದತ್ತಿ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಾ. ಡಿಸೋಜಾ ಅವರ ಮಕ್ಕಳ ಸಾಹಿತ್ಯ ವಿಶಿಷ್ಟವಾದದ್ದು. ಮಕ್ಕಳಿಗಾಗಿ ಹಲವಾರು ಕಥೆಗಳನ್ನು ರಚಿಸಿದ್ದಾರೆ. ಅವರು ಪಂಚತAತ್ರದ ಕಥೆಗಳ ಮುಂದೆ ಯಾವುದೇ ಮಕ್ಕಳ ಕಥೆಗಳು ಇಲ್ಲ ಎನ್ನುವ ಮಾತನ್ನು ಕೂಡ ಹೇಳಿದ್ದರು. ಅಲ್ಲದೆ ಕನ್ನಡ ಸಾರಸ್ವತ ಲೋಕದಲ್ಲಿ ಹಲವಾರು ಹಿರಿಯ ಸಾಹಿತಿಗಳು ತಮ್ಮ ವಿಚಾರವನ್ನು ಮಂಡಿಸಿದ್ದಾರೆ. ಅವೆಲ್ಲವನ್ನೂ ಓದುವ ಅವಕಾಶ ವಿದ್ಯಾರ್ಥಿಗಳಿಗೆ ಇದೆ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಪ್ರಾಸ್ತವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್, ನಾಬರ್ಟ್ ಡಿಸೋಜ ಇದು ನಾ. ಡಿಸೋಜಾರವರ ಹೆಸರು. ಸರ್ಕಾರಿ ನೌಕರರಾಗಿದ್ದು ಸಾಹಿತ್ಯ ಲೋಕದಲ್ಲಿ ಹೆಚ್ಚು ಅತ್ಯುತ್ತಮ ಕೃತಿಗಳನ್ನು ನೀಡಿದ ಸರಳ ಸಜ್ಜನ ಸಾಹಿತಿ ಆಗಿದ್ದಾರೆ. ಅವರಿಗೆ ಡಾಕ್ಟರೇಟ್ ಪದವಿ ಬಂದಿದ್ದರೂ ಎಲ್ಲಿಯೂ ಅವರು ತಮ್ಮ ಹೆಸರಿನೊಂದಿಗೆ ಡಾಕ್ಟರ್ ಪದವನ್ನು ಸೇರಿಸಿಕೊಳ್ಳುತ್ತಿರಲಿಲ್ಲ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಕೂಡಕಂಡಿ ದಯಾನಂದ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡುತ್ತಿರುವ ಕೆಲಸಗಳ ಕುರಿತು ಶ್ಲಾಘನೆ ವ್ಯಕ್ತಪಡಿಸಿದರು. ಕನ್ನಡ ನಾಡು ನುಡಿ ಆಚಾರ-ವಿಚಾರ ಪರಂಪರೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸುವ ಕಾರ್ಯ ಮಾಡುತ್ತಿರುವುದು ಪ್ರೋತ್ಸಾಹದಾಯಕ ಎಂದರು.
ವಿರಾಜಪೇಟೆ ಉಪವಿಭಾಗದ ಪೊಲೀಸ್ ಉಪ ಅಧೀಕ್ಷಕ ಎಸ್. ಮಹೇಶ್ ಕುಮಾರ್ ಮಾತನಾಡಿ ಇಂದಿನ ವಿದ್ಯಾರ್ಥಿಗಳು, ಯುವ ಪೀಳಿಗೆ ಸಾಹಿತ್ಯದತ್ತ ಮುಖ ಮಾಡದೆ ವಿರುದ್ಧ ದಿಕ್ಕಿನಲ್ಲಿ ಹೋಗುತ್ತಿದೆ ಅವರೆಲ್ಲರನ್ನೂ ಸಾಹಿತ್ಯ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ವಿಚಾರಗಳ ಕಡೆಗೆ ಕರೆದುಕೊಂಡು ಬರುವ ಕೆಲಸ ಮಾಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.
ಕೊಡಗು ಕಸಾಪ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ. ರಾಜೇಶ್ ಪದ್ಮನಾಭ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್, ಸದಸ್ಯರಾದ ಎ.ಯು ಮೊಹಮ್ಮದ್, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಕೆ. ಬಸವರಾಜ್, ಉಪನ್ಯಾಸಕರಾದ ಡಾ. ಪ್ರಭು, ಕನ್ನಡ ಸಹ ಪ್ರಾಧ್ಯಾಪಕ ರಘುರಾಜ್, ಹೆಚ್.ಆರ್. ಹರೀಶ್, ಸುಹೈರ ಸೇರಿದಂತೆ ಕಾಲೇಜಿನ ಆಧ್ಯಾಪಕರು, ವಿದ್ಯಾರ್ಥಿಗಳು ಇದ್ದರು.