ಜಿಲ್ಲೆ

ಜೆ. ಹುಚ್ಚಪ್ಪಗೆ ‘ಮ. ರಾಮಮೂರ್ತಿ ಪ್ರಶಸ್ತಿ’

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2024ನೇ ಸಾಲಿನ ‘ಕನ್ನಡ ಚಳವಳಿ ವೀರ ಸೇನಾನಿ ಮ. ರಾಮಮೂರ್ತಿ’ ಪ್ರಶಸ್ತಿಗೆ ಕನ್ನಡ ಪರ ಹೋರಾಟಗಾರ ಜೆ. ಹುಚ್ಚಪ್ಪ ಆಯ್ಕೆಯಾಗಿದ್ದಾರೆ.

ಕನ್ನಡ ನಾಡು- ನುಡಿ, ಜಲ, ಸಂಸ್ಕೃತಿಗಳ ರಕ್ಷಣೆಗೆ ಹಾಗೂ ಪ್ರಗತಿಗೆ ಶ್ರಮಿಸುತ್ತಿರುವವರನ್ನು ಗುರುತಿಸಬೇಕು ಎನ್ನುವುದು ಈ ದತ್ತಿ ಪ್ರಶಸ್ತಿಯ ಆಶಯವಾಗಿದೆ. ಮಾಜಿ ಮೇಯರ್ ಜೆ. ಹುಚ್ಚಪ್ಪ ಕನ್ನಡಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದವರು. ಇವರ ಸೇವೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.