ಜಿಲ್ಲೆ

ಕನ್ನಡ ಸಾಹಿತ್ಯ ಪರಿಷತ್ತು ಸದಸ್ಯತ್ವ ಅಭಿಯಾನ

ಬೆಂಗಳೂರಿನ ವಿಜಯನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಮಂಗಳವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತು ಸದಸ್ಯತ್ವ ಅಭಿಯಾನವನ್ನು ಶ್ರೀ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು. ಈ ವೇಳೆ ವಿಜಯನಗರ ಕ್ಷೇತ್ರದ ಕಸಾಪ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಉಮೇಶ್ ಚಂದ್ರಗೆ ಕನ್ನಡ ಬಾವುಟ ನೀಡಿ ಶುಭಕೋರಲಾಯಿತು. ಶ್ರೀ ಸೌಮ್ಯನಾಥ ಸ್ವಾಮೀಜಿ, ಶಾಸಕ ಎಂ.ಕೃಷ್ಣಪ್ಪ , ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ, ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗಶೆಟ್ಟಿ ಇತರರಿದ್ದರು.