ಜಿಲ್ಲೆ

ಡಿ.7ರಂದು ದುದ್ದದಲ್ಲಿ ಅಕ್ಷರಜಾತ್ರೆ: ಮನ್‌ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು ಮಾಹಿತಿ

reportermys

ಮಂಡ್ಯ: ತಾಲೂಕಿನ ದುದ್ದ ಗ್ರಾಮದಲ್ಲಿ ಡಿ.7ರಂದು 17ನೇ ಮಂಡ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಅಕ್ಷರ ಜಾತ್ರೆ ಅಂಗವಾಗಿ ಇಡೀ ದಿನ ವಿಶೇಷ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಲಾಗಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷರೂ ಆದ ಮನ್‌ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು ತಿಳಿಸಿದರು.

ದುದ್ದ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನಾಧ್ಯಕ್ಷರಾಗಿ ನಿವೃತ್ತ ಕನ್ನಡ ಪ್ರಾಧ್ಯಾಪಕಿ, ಸಾಹಿತಿ ಡಾ.ಲೀಲಾ ಅಪ್ಪಾಜಿ ಅವರನ್ನು ಆಯ್ಕೆ ವಾಡಲಾಗಿದೆ. ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು ಗೌರವಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಅಂದು ಬೆಳಗ್ಗೆ 8.30ಕ್ಕೆ ಸಮ್ಮೇಳನದ ಧ್ವಜಾರೋಹಣ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಅಂದು ಬೆಳಗ್ಗೆ 9.30ಕ್ಕೆ ಡಾ.ಲೀಲಾ ಅಪ್ಪಾಜಿ ಅವರನ್ನು ಮೆರವಣಿಗೆಯಲ್ಲಿ ಸಮ್ಮೇಳನದ ವೇದಿಕೆಗೆ ಕರೆತರಲಾಗುವುದು. 11 ಗಂಟೆಗೆ ಕೇಂದ್ರ ಕಸಾಪ ಅಧ್ಯಕ್ಷ ಮಹೇಶ್ ಜೋಷಿ ಸಮ್ಮೇಳನ ಉದ್ಘಾಟಿಸಲಿದ್ದು, ಮಧ್ಯಾಹ್ನ 1 ಗಂಟೆಗೆ ವಿಚಾರಗೋಷ್ಠಿ, 2.30 ಕ್ಕೆ ಕವಿಗೋಷ್ಠಿ, 3 ಗಂಟೆಗೆ ಸಂವಾದ, 4ಕ್ಕೆ ಸನ್ಮಾನ ಸವಾರಂಭ ಹಾಗೂ 5 ಗಂಟೆಗೆ ಸವಾರೋಪ ಸವಾರಂಭ ನಡೆಯಲಿದೆ ಎಂದು ತಿಳಿಸಿದರು.

ಸಂಜೆ 6.30ಕ್ಕೆ ನಟ ಮಂಡ್ಯ ರಮೇಶ್ ಅವರ ನಟನಾ ತಂಡ ‘ಚೋರ ಚರಣದಾಸ’ ನಾಟಕ ಪ್ರದರ್ಶಿಸಲಿದೆ. ಸಮ್ಮೇಳನದಲ್ಲಿ ಸುವಾರು 2500ಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಬೆಳಗಿನ ತಿಂಡಿ, ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟಕ್ಕೆ ವ್ಯವಸ್ಥೆ ವಾಡಲಾಗಿದೆ. ಬೆಳಗ್ಗೆ 8.30 ರಿಂದ ರಾತ್ರಿ 11 ಗಂಟೆಯವರೆಗೂ ವಿವಿಧ ಗೋಷ್ಠಿಗಳು ನಡೆಯಲಿವೆ ಎಂದು ತಿಳಿಸಿದರು.

ಕಸಾಪ ಜಿಲ್ಲಾಧ್ಯಕ್ಷ ರವಿಕುವಾರ ಚಾಮಲಾಪುರ ವಾತನಾಡಿ, ಶಾಸಕ ಸಿ.ಎಸ್.ಪುಟ್ಟರಾಜು, ಮನ್‌ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು, ಪ್ರಥಮ ದರ್ಜೆ ಗುತ್ತಿಗೆದಾರ ಹೊಸಹಳ್ಳಿ ಬಾಲರಾಜ್ ಅವರ ಸಹಕಾರದೊಂದಿಗೆ ಸಮ್ಮೇಳನ ಆಯೋಜಿಸಲಾಗಿದೆ. ಸಾಹಿತಿ ಹಿ.ಶಿ.ರಾಮಚಂದ್ರಗೌಡ ಸೇರಿದಂತೆ ಹಲವು ಸಾಹಿತಿಗಳು ಭಾಗವಹಿಸಲಿದ್ದಾರೆ ಎಂದರು.

ಕಸಾಪ ಕೋಶಾಧ್ಯಕ್ಷ ಬಿ.ಎಂ.ಅಪ್ಪಾಜಪ್ಪ, ಶಿವಲಿಂಗೇಗೌಡ, ಸುಜಾತಾಕೃಷ್ಣ, ಎಂ.ಆರ್.ಮಂಜು ಇತರರಿದ್ದರು.