ಹೂವಿನಹಡಗಲಿ ತಾಲೂಕಿನ ಕಾಂತೆಬೆನ್ನೂರು ಗ್ರಾಮದಲ್ಲಿ ಮಂಗಳವಾರ ಶ್ರೀ ಮೈಲಮ್ಮ ಹಾಗೂ ಸಿದ್ಧಿ ವಿನಾಯಕ ರಥೋತ್ಸವದ ಅಂಗವಾಗಿ ಕಾಶಿ ಪೀಠದ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯರ ಅಡ್ಡಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ಜರುಗಿತು. 
ಜಿಲ್ಲೆ

ಕಾಶಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಅದ್ದೂರಿ

ಹೂವಿನಹಡಗಲಿ: ತಾಲೂಕಿನ ಕಾಂತೆಬೆನ್ನೂರು ಗ್ರಾಮದ ಮೈಲಮ್ಮ ದೇವಿ ಹಾಗೂ ಸಿದ್ಧಿ ವಿನಾಯಕ ದೇವರ ಜೋಡಿ ರಥೋತ್ಸವ, ಉಚಿತ ಸಾಮೂಹಿಕ ವಿವಾಹ ಅಂಗವಾಗಿ ಮಂಗಳವಾರ ಕಾಶಿ ಪೀಠದ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯರ ಅಡ್ಡಪಲ್ಲಕ್ಕಿ ಉತ್ಸವ ಜರುಗಿತು.

ಕಾಶಿ ಪೀಠದ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯರು ಮಾತನಾಡಿ, ನೂತನ ದಾಂಪತ್ಯ ಜೀವನವನ್ನು ಆರಂಭಿಸುತ್ತಿರುವ ದಂಪತಿಗಳು ಗುರು ಹಿರಿಯರಿಗೆ ಗೌರವ ನೀಡುವ ಮೂಲಕ ಜೀವನ ನಡೆಸಬೇಕು ಎಂದು ಆಶೀರ್ವಚನ ನೀಡಿದರು.

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 18 ಜೋಡಿಗಳು ನವ ಜೀವನಕ್ಕೆ ಕಾಲಿಟ್ಟರು. ಸಂಜೆ ಮೈಲಮ್ಮ ದೇವಿ ಹಾಗೂ ಸಿದ್ಧಿವಿನಾಯಕ ದೇವರ ರಥೋತ್ಸವ ಜರುಗಿತು.

ಮಾನಿಹಳ್ಳಿ ಮಠದ ಮಳೆಯೋಗೀಶ್ವರ ಸ್ವಾಮೀಜಿ, ಹೊಳಲು ಮಲ್ಲಿಕಾರ್ಜುನ ಮಠದ ಚನ್ನಬಸವ ದೇವರು, ಹಿರೇಹಡಗಲಿಯ ಹಾಲಸ್ವಾಮಿ ಮಠದ ಹಾಲಸ್ವಾಮೀಜಿ, ಅಂಗೂರೇಶ್ವರ ಮಠದ ಶಿವಯೋಗೀಶ್ವರ ಸ್ವಾಮೀಜಿ, ದೇವಸ್ಥಾನದ ಅರ್ಚಕ ಮಂಜುನಾಥ ಹಾಗೂ ಸುತ್ತಲಿನ ಗ್ರಾಮಗಳ ಭಕ್ತರು ಅಡ್ಡಪಲ್ಲಕ್ಕಿ ಉತ್ಸವ ಮತ್ತು ರಥೋತ್ಸವದಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.