ಸೋಮವಾರಪೇಟೆ ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ವತಿಯಿಂದ ಜೇಸಿ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಯಮಿ ಹರಪಳ್ಳಿ ರವೀಂದ್ರ ಮಾತನಾಡಿದರು. ಮಹೇಶ್, ದೀಪಕ್, ವಿಜೇತ್, ಸೋಮಪ್ಪ ಇದ್ದರು.  
ಜಿಲ್ಲೆ

ಸಾರ್ವಜನಿಕರಿಗೆ ಕಾವೇರಿ ತೀರ್ಥ ವಿತರಣೆ

ನಾಗೇಶ ಎಸ್

ಸೋಮವಾರಪೇಟೆ: ಪಟ್ಟಣದ ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ವತಿಯಿಂದ ಪವಿತ್ರ ಕಾವೇರಿ ತೀರ್ಥವನ್ನು ಸಾರ್ವಜನಿಕರಿಗೆ ಶನಿವಾರ ವಿತರಿಸಲಾಯಿತು.

ಇಲ್ಲಿನ ಜೇಸಿ ವೇದಿಕೆಯಲ್ಲಿ ಆಯೋಜಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ದಕ್ಷಿಣ ಭಾರತದ ಪ್ರಮುಖ ನದಿಯಾದ ಕಾವೇರಿಯ ಮೂಲಸ್ಥಾನದ ಪಾವಿತ್ರ್ಯತೆ ಕಾಪಾಡುವುದರೊಂದಿಗೆ, ನದಿಯ ಮಲೀನತೆಯನ್ನು ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು ಎಂದರು.

ನದಿಗೆ ತ್ಯಾಜ್ಯದ ನೀರು ಸೇರದಂತೆ, ತ್ಯಾಜ್ಯ ಎಸೆಯದಂತೆ ಜಾಗ್ರತೆ ವಹಿಸಬೇಕು. ಈ ನಿಟ್ಟಿನಲ್ಲಿ ಜನತೆ ಪ್ರಜ್ಞಾವಂತಿಕೆ ಮೆರೆಯಬೇಕು ಎಂದು ಕರೆ ನೀಡಿದರು.

ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಆರ್. ಮಹೇಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ. ವಿಜೇತ್, ಎಐಟಿಯುಸಿ ಜಿಲ್ಲಾಧ್ಯಕ್ಷ ಎಚ್.ಎಂ.ಸೋಮಪ್ಪ, ಕರ್ನಾಟಕ ರಕ್ಷಣಾ ವೇದಿಕೆ-ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್, ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಉಮೇಶ್, ಅಪ್ಪು ಅಭಿಮಾನಿ ಬಳಗದ ಅಧ್ಯಕ್ಷ ರವಿಕುಮಾರ್, ಕಾಫಿ ಬೆಳೆಗಾರ ಕಾಟ್ನಮನೆ ಗಿರೀಶ್, ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ. ನಾಗರಾಜು ಇದ್ದರು.