ಜಿಲ್ಲೆ

3 ದಿನ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

ಪವನ್ ಆಚಾರ್ಯ ನೀರ್ಚಾಲು

ಬೆಂಗಳೂರು: ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸೆ.15,16 ಮತ್ತು 17ರಂದು ಸ್ಥಗಿತಗೊಳಿಸಲಾಗುತ್ತಿದೆ. ಈ ಜಲರೇಚಕ ಯಂತ್ರಾಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್​ ಪ್ರಸಾತ್​ ಮನೋಹರ್​ ತಿಳಿಸಿದ್ದಾರೆ.

ನಗರದ ಜನತೆಗೆ ಯಾವುದೇ ಅಡೆತಡೆಯಿಲ್ಲದೇ ಕುಡಿಯುವ ನೀರನ್ನು ಸರಬರಾಜು ಮಾಡಲು, ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಗಾರಗಳು ಮತ್ತು ಮುಖ್ಯ ಕೊಳವೆ ಮಾರ್ಗಗಳ ಸುಲಲಿತ ಚಾಲನೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸುಸ್ಥಿತಿಯಲ್ಲಿಡುವ ಉದ್ದೇಶದಿಂದ ಜಲಮಂಡಳಿಯ ವಿವಿಧೆಡೆ ನಿಯಮಿತ ತುರ್ತು ನಿರ್ವಹಣೆಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.

ಕಾವೇರಿ 5ನೇ ಹಂತದ ಜಲರೇಚಕ ಯಂತ್ರಾಗಾರಗಳು(ಪಂಪಿಂಗ್​ ಸ್ಟೇಶನ್​) ಸೆ.15ರ ಬೆಳಗ್ಗೆ 1ರಿಂದ ಸೆ.17ರ ಮಧ್ಯಾಹ್ನ 1ರವರೆಗೆ ಒಟ್ಟು 60 ಗಂಟೆಗಳು. ಕಾವೇರಿ ನೀರು ಸರಬರಾಜು ಯೋಜನೆಯ ಹಂತ-&1, ಹಂತ-&2, ಹಂತ-&3, ಹಂತ-&4 1ನೇ ಘಟ್ಟ ಮತ್ತು 2ನೇ ಘಟ್ಟಗಳ ಜಲರೇಚಕ ಯಂತ್ರಾಗಾರಗಳನ್ನು ಸೆ.16ರ ಬೆಳಗ್ಗೆ 6ರಿಂದ ಸೆ.17ರ ಬೆಳಗ್ಗೆ 6ರವರೆಗೆ ಒಟ್ಟು 24 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುತ್ತಿದೆ.