ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ ಮಂಜೂರಾತಿಗೆ ಸಂಬಂಧಿಸಿದಂತೆ ಬಾಗಲವಾಡದಲ್ಲಿ ಪ್ರತಿಭಟನಾಕಾರರೊಂದಿಗೆ ಮಾನ್ವಿ ಕ್ಷೇತ್ರ ಶಿಕ್ಷಣಧಿಕಾರಿ ಚಂದ್ರಶೇಖರ ದೊಡ್ಡಮನಿ ಮಂಗಳವಾರ ಚರ್ಚಿಸಿದರು. 
ಜಿಲ್ಲೆ

ಕವಿತಾಳದಲ್ಲೇ ಪರೀಕ್ಷೆ ಬರೆಯಲು ಅವಕಾಶ- ಬಿಇಒ ಚಂದ್ರಶೇಖರ ದೊಡ್ಡಮನಿ ಹೇಳಿಕೆ

ಕವಿತಾಳ: ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ ಮಂಜೂರು ಮಾಡುವಂತೆ ಆಗ್ರಹಿಸಿ ಬಾಗಲವಾಡದಲ್ಲಿ ಗ್ರಾಮಸ್ಥರು ನಡೆಸಿರುವ ಪ್ರತಿಭಟನೆ ಮಂಗಳವಾರ ಎರಡು ದಿನ ಪೂರೈಸಿತು.

ಮಾನ್ವಿ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ ಗ್ರಾಮಕ್ಕೆ ಭೇಟಿ ಪ್ರತಿಭಟನಾನಿರತರೊಂದಿಗೆ ಚರ್ಚಿಸಿದರು. ಬ್ಯಾಗವಾಟಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ ಮಂಜೂರಾಗಿದ್ದಕ್ಕೆ ಸಹಕಾರ ನೀಡಬೇಕು. ಈ ಮೂಲಕ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು. ಬಾಗಲವಾಡದಲ್ಲಿ ಪರೀಕ್ಷಾ ಕೇಂದ್ರ ಮಂಜೂರಾಗುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದರು.

ಗ್ರಾಮಸ್ಥರ ಹೋರಾಟ ಹಿನ್ನೆಲೆಯಲ್ಲಿ ಬಿಇಒ ಮೇಲಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಚರ್ಚಿಸಿದರು. ಬಳಿಕ ಮಾತನಾಡಿ, ಬ್ಯಾಗವಾಟ ಗ್ರಾಮಕ್ಕೆ ಮಂಜೂರಾಗಿರುವ ಪರೀಕ್ಷಾ ಕೇಂದ್ರ ರದ್ದುಪಡಿಸಿ ಈ ಮೊದಲಿನಂತೆ ಕವಿತಾಳದಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುವುದು ಎಂದರು. ಬಿಇಒ ಭರವಸೆಯಿಂದಾಗಿ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟರು.