ಜಿಲ್ಲೆ

ಕವಿವ ಸಂಘದ ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭ

ವಿಜಯವಾಣಿ ಸುದ್ದಿಜಾಲ ಧಾರವಾಡ

ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆ ಹಿನ್ನೆಲೆಯಲ್ಲಿ ಮೇ 9ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ ದಿನವಾದ ಶುಕ್ರವಾರ 15 ಜನರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಚಂದ್ರಕಾಂತ ಬೆಲ್ಲದ, ಉಪಾಧ್ಯಕ್ಷ ಸ್ಥಾನಕ್ಕೆ ಡಾ. ಸಂಜೀವ ಕುಲಕರ್ಣಿ, ಕಾರ್ಯಾಧ್ಯಕ್ಷ ಸ್ಥಾನಕ್ಕೆ ಬಸವಪ್ರಭು ಹೊಸಕೇರಿ, ಕೋಶಾಧ್ಯಕ್ಷ ಸ್ಥಾನಕ್ಕೆ ಸತೀಶ ತುರಮರಿ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಶಂಕರ ಹಲಗತ್ತಿ, ಸಹ ಕಾರ್ಯದರ್ಶಿ ಸ್ಥಾನಕ್ಕೆ ಶಂಕರ ಕುಂಬಿ, ಕಾರ್ಯಕಾರಿ ಮಹಿಳಾ ಮೀಸಲು ಸ್ಥಾನಕ್ಕೆ ವಿಶ್ವೇಶ್ವರಿ ಹಿರೇಮಠ, ಕಾರ್ಯಕಾರಿ ಎಸ್​ಸಿ, ಎಸ್​ಟಿ ಮೀಸಲು ಸ್ಥಾನಕ್ಕೆ ಪ್ರೊ. ಧನವಂತ ಹಾಜವಗೋಳ ಹಾಗೂ ಸಾಮಾನ್ಯ ಸ್ಥಾನಕ್ಕೆ ಡಾ. ಶೈಲಜಾ ಅಮರಶೆಟ್ಟಿ, ವೀರಣ್ಣ ಒಡ್ಡೀನ, ಗುರು ಹಿರೇಮಠ, ಡಾ. ಜೆ.ಎ. ಹಡಗಲಿ, ಪ್ರೊ. ಶಶಿಧರ ತೋಡಕರ, ಶಿವಾನಂದ ಭಾವಿಕಟ್ಟಿ, ಮಹಾಂತೇಶ ನರೇಗಲ್ಲ ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಸಿ.ಎಸ್​. ನೇಗಿನಹಾಳ ತಿಳಿಸಿದ್ದಾರೆ.