ಬೆಂಗಳೂರು: ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ ವತಿಯಿಂದ ನೀಡಲಾಗುವ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ‘ಕಾಯಕ ರತ್ನ’ ಪ್ರಶಸ್ತಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ಪ್ರಗತಿಪರ ರೈತ ಜಿ. ಶಿವಲಿಂಗೇಗೌಡ ಆಯ್ಕೆಯಾಗಿದ್ದಾರೆ.
ವ್ಯವಸಾಯದಲ್ಲಿನ ಅಪಾರ ಅನುಭವ ಹಾಗೂ ಅರವತ್ತು ವರ್ಷಗಳಲ್ಲಿ ಕಷಿ ಕ್ಷೇತ್ರದ ಕಷ್ಟ ನಷ್ಟದ ನಡುವೆ ಉಪ ಕಸುಬುಗಳನ್ನು ಮಾಡಿಕೊಂಡಿರುವ ಇವರು, ಪ್ರಗತಿಪರ ರೈತರಾಗಿ ಇತರರಿಗೆ ಮಾದರಿಯಾಗಿದ್ದಾರೆ.
ಶನಿವಾರ (ಜು.13) ಬೀದರ್‌ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪರಿಷತ್‌ನ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ್ ಹಾಗೂ ಬೆಂ.ದಕ್ಷಿಣ ಜಿಲ್ಲಾಧ್ಯಕ್ಷ ಬಿ.ಜಿ. ಜಗದೀಶ್ ತಿಳಿಸಿದ್ದಾರೆ.