ಕಾಯಕ ಶರಣರ ಜಯಂತಿ  
ಜಿಲ್ಲೆ

ಜಿ¯್ಲÁಡಳಿತದಿಂದ ಕಾಯಕ ಶರಣರ ಜಯಂತಿ ಸಮಸಮಾಜ ಕಟ್ಟುವಲ್ಲಿ ಕಾಯಕ ಶರಣರ ಕೊಡುಗೆ ಅಪಾರ; ಸುರೇಶ ವರ್ಮ

ರಾಯಚೂರು ಮೂಢನಂಬಿಕೆಗಳು, ಜÁತಿ ಪದ್ಧತಿ, ಅಸಮಾನತೆಯ ವಿರುದ್ಧ ವಚನಗಳ ಮೂಲಕ ಜನರಲ್ಲಿ ಜÁಗೃತಿ ಮೂಡಿಸಿ ಕಾಯಕ ನಿಷ್ಠೆ ಮೆರೆದ ಕಾಯಕ ಶರಣರ ಕೊಡುಗೆ ಅಪಾರವಾಗಿದೆಂದು ತಹಶೀಲ್ದಾರ್ ಸುರೇಶ ವರ್ಮ ಅವರು ಹೇಳಿದರು.

ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮAದಿರದಲ್ಲಿ ಸೋಮವಾರ ಜಿ¯್ಲÁಡಳಿತ, ಜಿ¯್ಲÁ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜನೆ ಮಾಡಲಾಗಿದ್ದ ಕಾಯಕ ಶರಣರ ಜಯಂತಿ ನಿಮಿತ್ತ ಮಾದರ ಚನ್ನಯ್ಯ, ಮಾದರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ, ಉರಿಲಿಂಗ ಪೆದ್ದಿ ಕಾಯಕ ಶರಣರ ಭಾವಚಿತ್ರಕ್ಕೆ ವಿವಿಧ ಗಣ್ಯರು ಪುಷ್ಪಾರ್ಚನೆ ಮಾಡಿ ಮಾತನಾಡಿ,

ಸರಳ ಜೀವನ, ಶುದ್ಧ ಧ್ಯಾನ, ನಿಷ್ಕಲ್ಮಶ ಭಕ್ತಿ ಮಾರ್ಗದಿಂದ ಮುಕ್ತಿ ಸಾಧ್ಯವೆಂದು ಸಾರಿದ ಕಾಯಕ ಶರಣರ ವಚನಗಳು ಇಂದಿಗೂ ಚಿರಪರಿಚಿತವಾಗಿವೆ. ೧೨ನೇ ಶತಮಾನವು ಧಾರ್ಮಿಕ, ಸಾಮಾಜಿಕ, ರಾಜಕೀಯವಾಗಿ ಕ್ರಾಂತಿ ಉಂಟುಮಾಡಿದೆ. ಇವತ್ತಿನ ನಮ್ಮ ಸಂವಿಧಾನದ ಪಾರ್ಲಿಮೆಂಟï ಮಾದರಿಯಲ್ಲಿ ಅಂದಿನ ಅನುಭವ ಮಂಟಪ ಇತ್ತು. ಯಾರನ್ನೂ ಕೀಳಾಗಿ ಕಾಣಬಾರದು ಎಂಬುವುದು ಬಸವೇಶ್ವರರ ಸಮಾನತೆಯ ತತ್ವವಾಗಿದ್ದು, ಅವರ ಹಾದಿಯಲ್ಲಿ ನಡೆದ ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಮತ್ತು ಉರಿಲಿಂಗ ಪೆದ್ದಿಯವರು ಶರಣ ಪಡೆಯ ಮಹನೀಯರಾಗಿz್ದÁರೆ ಎಂದು ಹೇಳಿದರು.

ಸಾಹಿತಿ ವೀರಹನುಮಾನ ಅವರು ಉಪನ್ಯಾಸ ನೀಡಿ, ಶರಣದ ವಚನಗಳು ಇಂದಿನ ಆಧುನಿಕ ಯುಗದಲ್ಲಿ ಅತ್ಯವಶ್ಯಕವಾಗಿವೆ. ಯುವ ಪೀಳಿಗೆ ಅವರ ಆದರ್ಶಗಳನ್ನು ಪಾಲಿಸಿ ಮುನ್ನಡೆಯಬೇಕಿದೆ ಎಂದು ತಿಳಿಸಿದರು.

ಶರಣರು ತಮ್ಮ ವಚನದ ಮೂಲಕ ಸಾಹಿತ್ಯವನ್ನು ಸರಳ ಕನ್ನಡದಲ್ಲಿ ಸಮಾನ್ಯ ಜನರಿಗೆ ಅರ್ಥವಾಗುವ ರೀತಿ ತಿಳಿಸಿz್ದÁರೆ. ಕಾಯಕದಲ್ಲಿ ಸ್ವರ್ಗ ಕಾಣಬಹುದು. ಕಾಯಕವೇ ದೇವರು ಎಂದು ಎಂದು ತಿಳಿಸಿಕೊಟ್ಟಿz್ದÁರೆ. ನಡೆ ಮತ್ತು ನುಡಿ ಒಂದೇ ರೀತಿಯಲ್ಲಿ ಇರಬೇಕು. ಎಂದು ಶರಣರು ವಚನಗಳ ಮೂಲಕ ತಿಳಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ರಾಯಚೂರು ತಾಲೂಕು ಗ್ರೇಡï-೨ ತಹಶೀಲ್ದಾರï ಭೀಮರಾಯ ಸೇರಿದಂತೆ ವಿವಿಧ ಮುಖಂಡರು ಇದ್ದರು.