ಜಿಲ್ಲೆ

ಕಯ್ಯರು ಶಾಲೆ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಸೌಮ್ಯ ಆರ್

ಕಾಸರಗೋಡು: ಪೈವಳಿಕೆ ಪಂಚಾಯಿತಿ ಜೋಡುಕಲ್ಲು ಸನಿಹದ ಕಯ್ಯರು ಶ್ರೀ ರಾಮಕೃಷ್ಣ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಗೆ ಎಡಕ್ಕಾನ ಶಾಂಭವಿ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕೊಡುಗೆಯಾಗಿ ನೀಡಿದ ಕಂಪ್ಯೂಟರ್ ಲ್ಯಾಬನ್ನು ಶಾಂಭವಿ ಫ್ಯಾಮಿಲಿ ಟ್ರಸ್ಟ್‌ನ ಸಂಚಾಲಕ ಇ.ಎಸ್.ಮಹಾಬಲೇಶ್ವರ ಭಟ್ ಉದ್ಘಾಟಿಸಿದರು.

ಶಾಲಾ ಪ್ರಬಂಧಕ ಪಿ.ಭಾಸ್ಕರನ್ ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿ ರಾಜಗೋಪಾಲ್ ಮುಖ್ಯ ಅತಿಥಿಯಾಗಿದ್ದರು. ಪೈವಳಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ, ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಜೆಡ್.ಎ.ಕಯ್ಯರ್, ಎಂಜಿನಿಯರ್ ಭರತ್‌ರಾಜ್ ಆಚಾರ್, ಮಾಯಿಪ್ಪಾಡಿ ಡಯೆಟ್‌ನ ಮಧುಸೂದನನ್, ಬ್ಲಾಕ್ ಪ್ರಾಜೆಕ್ಟ್ ಕೋ ಆರ್ಡಿನೇಟರ್ ಜೋಯ್ ಜಿ., ನಿವೃತ್ತ ಮುಖ್ಯಶಿಕ್ಷಕ ರಾಜಗೋಪಾಲ್, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ದೀಪಕ್ ಶರ್ಮಾ, ಮಾತೃ ಮಂಡಳಿ ಅಧ್ಯಕ್ಷೆ ನವ್ಯಾ, ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ರತ್ನಾಕರ್ ಅರಿಯಾಲ, ಶಾಲಾ ಮುಖ್ಯಶಿಕ್ಷಕಿ ಪ್ರೇಮಲತಾ ಮೊದಲಾದವರು ಉಪಸ್ಥಿತರಿದ್ದರು.

ಮಂಜೇಶ್ವರ ಉಪಜಿಲ್ಲಾಮಟ್ಟದ ಶಾಲಾ ಕಲೋತ್ಸವದಲ್ಲಿ ಬಹುಮಾನ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಿ ಅಭಿನಂದಿಸಲಾಯಿತು. ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷ ಅಶೋಕ್ ಬಾಡೂರು ಸ್ವಾಗತಿಸಿದರು. ಕಾರ್ಯದರ್ಶಿ ವೆಂಕಪ್ಪ ಶೆಟ್ಟಿ ನಿರೂಪಿಸಿ ವಂದಿಸಿದರು.