ಜಿಲ್ಲೆ

ಕ್ಯಾನ್ಸರ್ ಆಸ್ಪತ್ರೆಗೆ ಲಾಡ್ ಭೇಟಿ, ಸಮಸ್ಯೆ ನಿವಾರಣೆಯ ಭರವಸೆ

Dharwada - Basavaraj Idli

ಹುಬ್ಬಳ್ಳಿ: ಇಲ್ಲಿಯ ನವನಗರದ ಕ್ಯಾನ್ಸರ್ ಆಸ್ಪತ್ರೆಯು ಎದುರಿಸುತ್ತಿರುವ ತೊಂದರೆಗಳ ನಿವಾರಣೆಗಾಗಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ತಿಳಿಸಿದರು.

ನವನಗರದ ಕರ್ನಾಟಕ ಕ್ಯಾನ್ಸರ್ ಥೆರಪಿ ಹಾಗೂ ಸಂಶೋಧನಾ ಸಂಸ್ಥೆಗೆ ಬುಧವಾರ ಭೇಟಿ ನೀಡಿದ ಅವರು, ಆಸ್ಪತ್ರೆಯ ವಿವಿಧ ವಿಭಾಗಗಳನ್ನು ವೀಕ್ಷಣೆ ಮಾಡಿದರು. ವೈದ್ಯರು, ಆಡಳಿತ ಮಂಡಳಿ ಪದಾಧಿಕಾರಿಗಳೊಂದಿಗೆ ಚಚಿರ್ಸಿದರು.

ಕಂಪೆನಿಗಳ ಸಾಮಾಜಿಕ ಹೊಣೆಗಾರಿಗೆ (ಸಿಎಸ್ಆರ್) ನಿಧಿ ಅಡಿಯಲ್ಲಿ ಆಸ್ಪತ್ರೆಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಆಡಳಿತ ಮಂಡಳಿಯವರು ಆಸ್ಪತ್ರೆಯಲ್ಲಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಚಾರಿಟಿ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಚಟುವಟಿಕೆಗಳಿಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕೆಸಿಟಿಆರ್ ಐ ಆಡಳಿತ ಮಂಡಳಿ ಚೇರ್ಮನ್ ಡಾ. ಬಿ.ಆರ್. ಪಾಟೀಲ, ನಿರ್ದೇಶಕರಾದ ಮಹೇಂದ್ರ ಸಿಂಘಿ, ವೀರೇಂದ್ರ ಛೇಡಾ, ಡಾ. ವಿ.ಜಿ. ಯಳಮಲಿ, ಅನಿತಾ ಪಾಟೀಲ, ಪ್ರಕಾಶ ಹಿರೇಮಠ, ಪಾಲಿಕೆ ಸದಸ್ಯ ಮಂಜುನಾಥ ಬುರ್ಲಿ, ಡಿಎಚ್ಒ ಶಶಿ ಪಾಟೀಲ, ಅನಿಲ ಪಾಟೀಲ, ಬಸವರಾಜ ಕಿತ್ತೂರ, ದೇವಕಿ ಇತರರು ಇದ್ದರು.