ಜಿಲ್ಲೆ

ಕೆಡಿಪಿ ಸಭೆ 28ರಂದು

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ಅಧ್ಯತೆಯಲ್ಲಿ ಜ. 28ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ 2024-25ನೇ ಸಾಲಿನ ಡಿಸೆಂಬರ 2024ರ ಅಂತ್ಯಕ್ಕೆ ಕೊನೆಗೊಂಡಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಆಯೋಜಿಸಲಾಗಿದೆ. ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಕೆಡಿಪಿ ಸಭೆಗೆ ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗಲು ಜಿಪಂ ಸಿಇಒ ತಿಳಿಸಿದ್ದಾರೆ.