ಕಲಬುರಗಿ : ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಇದೇ ನವೆಂಬರ್ 6ಕ್ಕೆ ನಿಗದಿಯಾಗಿದ್ದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಸಭೆಯನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಉಪ ಚುನಾವಣೆ ಘೋಷಣೆಯಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸಭೆ ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.