ಜಿಲ್ಲೆ

ಪರಿಸರ ಸ್ವಚ್ಛವಾಗಿಟ್ಟುಕೊಳ್ಳಿ

ಅವಿನಾಶ್ ಜೈನಹಳ್ಳಿ

ಕಾಲರಾ ಸೇರಿದಂತೆ ನಾನಾ ಸಾಂಕ್ರಾಮಿಕ ರೋಗಗಳ ಸಂಬಂಧ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ ಎಂದು ಡಿಎಚ್‌ಓ ಡಾ.ಪಿ.ಸಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ಮನೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಶುದ್ಧ ನೀರು ಕುಡಿಯಬೇಕು. ಈ ಬಗ್ಗೆ ನಮ್ಮ ಇಲಾಖೆ ವರ್ಷ ಪೂರ್ತಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ. ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಉದ್ಭವವಾಗದಂತೆ ಎಚ್ಚರ ವಹಿಸಲಾಗಿದೆ ಎಂದಿದ್ದಾರೆ.