ಜಿಲ್ಲೆ

ಹರಪಳ್ಳಿ ರವೀಂದ್ರಗೆ ಕೆಂಪೇಗೌಡ ಪ್ರಶಸ್ತಿ

ಆದರ್ಶ್. ಎಂ.ಕೆ.

ಕೂಡಿಗೆ: ಸಮಾಜ ಸೇವಕ, ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಅವರು ಕೆಂಪೇಗೌಡ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕರ್ನಾಟಕ ರಾಜ್ಯ ಒಕ್ಕಲಿಗರ ಜಾಗೃತಿ ಸಂಘದಿಂದ ಅ.೨ ರಂದು ಬೆಂಗಳೂರು ಕುವೆಂಪು ಕಲಾಕ್ಷೇತ್ರದಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಕಾರ್ಯಕ್ರಮ ಸಂಘಟಕರು ತಿಳಿಸಿದ್ದಾರೆ.