ದೇವನಹಳ್ಳಿಯ ಆವತಿಯಲ್ಲಿ ಕೆಂಪೇಗೌಡ ಜ್ಯೋತಿ ಹೊರಡಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ ನೀಡಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ರಾಜಣ್ಣ, ಬಯಪ ಅಧ್ಯಕ್ಷ ಶಾಂತಕುಮಾರ್, ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮತ್ತಿತರರಿದ್ದರು. 
ಜಿಲ್ಲೆ

ಜಿಲ್ಲಾದ್ಯಂತ ನಾಡಪ್ರಭುವಿಗೆ ಗೌರವ ನಮನ

ಶಿವರಾಜ.ಎಂ

ಕೆಂಪೇಗೌಡರ ಜಯಂತಿ ಅದ್ದೂರಿ

ಆವತಿ ಗ್ರಾಮದಲ್ಲಿ ಜ್ಯೋತಿರಥಯಾತ್ರೆ


ವಿಜಯವಾಣಿ ಸುದ್ದಿಜಾಲ ಬೆಂ.ಗ್ರಾಮಾಂತರ

ಬೆಂಗಳೂರಿನಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬೆಂಗಳೂರು ನಿರ್ಮಾತೃ ಕೆಂಪೇಗೌಡರ 515 ನೇ ಜಯಂತಿಯರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದಲ್ಲಿನ ಚನ್ನಕೇಶವ ದೇವಾಲಯದಿಂದ ಜ್ಯೋತಿ ಹೊರಡಿಸುವ ರಥಯಾತ್ರೆಗೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಖಾತೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಚಾಲನೆ ನೀಡಿದರು.
ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳದಿಂದ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಜ್ಯೋತಿ ಕಳುಹಿಸುವ ಅಂಗವಾಗಿ ನಾಡಪ್ರಭು ಕೆಂಪೇಗೌಡರ ಮೂಲಸ್ಥಳವಾದ ಆವತಿ ಗ್ರಾಮದಲ್ಲಿ ಗುರುವಾರ ಸಂಭ್ರಮ ಮನೆ ಮಾಡಿತ್ತು. ಮುಂಜಾನೆಯಿಂದಲೇ ಜಿಲ್ಲಾಡಳಿತದ ಸಿಬ್ಬಂದಿ ಸ್ಥಳದಲ್ಲಿ ಬೀಡುಬಿಟ್ಟಿದ್ದರು.
ಇದಕ್ಕೂ ಮುನ್ನ ಕೆಂಪೇಗೌಡರ ಪೂರ್ವಜರಾದ ರಣಭೈರೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸಚಿವರು ಗೌರವ ನಮನ ಸಲ್ಲಿಸಿ ನಂತರ ಚನ್ನಕೇಶವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಗ್ರಾಮದ ರಥಬೀದಿಯಲ್ಲಿ ಕೆಂಪೇಗೌಡರ ಜ್ಯೋತಿ ರೆಥಯಾತ್ರೆ ಮೆರಣಿಗೆ ನಡೆಯಿತು. ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್, ಬಿಬಿಎಂಪಿ ಯಲಹಂಕ ವಲಯದ ಆಯುಕ್ತ ಕರೀಗೌಡ, ಜಿಪಂ ಸಿಇಒ ಡಾ.ಕೆ.ಎನ್.ಅನುರಾಧಾ ಸೇರಿ ಹಿರಿಯ ಅಧಿಕಾರಿಗಳು ರಥಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಸೇರಿದ್ದ ಸಭಿಕರು ಕೆಂಪೇಗೌಡರಿಗೆ ಜಯೋಷ ಮೊಳಗಿಸಿದರು. ಇದೇ ವೇಳೆ ಕೆಂಪೇಗೌಡರ ಸಾಧನೆಗಳ ಗುಣಗಾನ ಮಾಡಲಾಯಿತು. ವಿವಿಧ ಜಾನಪದ ಕಲಾತಂಡಗಳು ರಥಯಾತ್ರೆಗೆ ಮೆರುಗು ನೀಡಿದವು.
ವಿಮಾನ ನಿಲ್ದಾಣದಲ್ಲಿ ಪುಷ್ಪನಮನ: ಆವತಿಯಿಂದ ಜ್ಯೋತಿ ರಥಯಾತ್ರೆ ಹೊರಟ ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಚಿವರು ಕೆಂಪೇಗೌಡರ ಪ್ರತಿಮೆಗೆ ಪುಷ್ಪನಮನ ಸಮರ್ಪಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜೂ. 29ರ ಶನಿವಾರಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.