ಸುಳ್ಯ: ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ತಾಪಂ ಸಭಾಂಗಣದಲ್ಲಿ ಗುರುವಾರ ಜರುಗಿತು.
ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ, ಬೆಂಗಳೂರನ್ನು ನಿರ್ಮಿಸಿದ ಕೆಂಪೇಗೌಡರ ನಾಯಕತ್ವ ಮತ್ತು ಆಡಳಿತ ಎಲ್ಲರಿಗೂ ಮಾದರಿ ಎಂದರು.
ನಾಡಪ್ರಭು ಕೆಂಪೇಗೌಡರ ಬಗ್ಗೆ ಶಿಕ್ಷಕಿ ಚಂದ್ರಮತಿ.ಕೆ ಮಾತನಾಡಿದರು. ನಪಂ ಅಧ್ಯಕ್ಷೆ ಶಶಿಕಲಾ ಎ.ನೀರಬಿದರೆ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎಂ.ಮುಸ್ತಫಾ , ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಗೌಡರ ಯುವ ಸೇವಾ ಸಂಘ ಅಧ್ಯಕ್ಷ ಪಿ.ಎಸ್.ಗಂಗಾಧರ , ಕರ್ನಾಟಕ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿರ್ದೇಶಕ ಚಂದ್ರ ಕೋಲ್ಚಾರ್, ತಾಪಂ ಇಒ ರಾಜಣ್ಣ , ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ, ನಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಕಿಶೋರಿ ಶೇಟ್, ಸದಸ್ಯರಾದ ಧೀರಾ ಕ್ರಾಸ್ತಾ, ಶಿಲ್ಪಾ ಸುದೇವ್ ಮತ್ತಿತರರು ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ವಂದಿಸಿದರು. ಮಮತಾ ಎಸ್.ಕೆ ಕಾರ್ಯಕ್ರಮ ನಿರೂಪಿಸಿದರು. ನಾಡಪ್ರಭು ಕೆಂಪೇಗೌಡರ ಭಾವಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.