ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಮಾತನಾಡಿದರು. 
ಜಿಲ್ಲೆ

ಕೆಂಪೇಗೌಡ ಜಯಂತಿ ಜೂನ್ ೨೭ಕ್ಕೆ

ನಿತ್ಯಾನಂದ ಎಸ್.ಎನ್.

ಚಿಕ್ಕಮಗಳೂರು: ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಜೂನ್ ೨೭ರಂದು ನಗರದ ಕುವೆಂಪು ಕಲಾಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಕೆಂಪೇಗೌಡರ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡುವ ಉz್ದೆÃಶದಿಂದ ವಿವಿಧ ಸ್ಫರ್ದೆಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಏರ್ಪಡಿಸಲಾಗಿದೆ. ೮ನೇ ತರಗತಿ ಮಕ್ಕಳಿಗೆ ಚಿತ್ರಕಲಾಸ್ಪರ್ಧೆ, ೯ನೇ ತರಗತಿಯವರಿಗೆ ರಂಗೋಲಿಸ್ಪರ್ಧೆ, ೧೦ನೇ ತರಗತಿಯವರಿಗೆ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲೆಯ ಎಲ್ಲ ಲೂಕು ಕೇಂದ್ರಗಳಲ್ಲಿ ಜೂನ್ ೨೫ ಮತ್ತು ೨೬ರಂದು ಸ್ಪರ್ಧೆಗಳು ನಡೆಯಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸಬಹುದು. ಪ್ರಥಮ ಬಹುಮಾನ ೩ಸಾವಿರ, ದ್ವಿತೀಯಬಹುಮಾನ ೨ಸಾವಿರ ರೂ. ತೃತೀಯ ಬಹುಮಾನ ೧ಸಾವಿರ ರೂ. ನಗದು ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ನೀಡಲಾಗುವುದು ಎಂದರು.
ಜಯAತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಪ್ರತಿ ತಾಲೂಕಿಗೆ ೧ ಲಕ್ಷ ರೂ. ಬಿಡುಗಡೆಮಾಡಲಾಗಿದೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಬಗ್ಗೆ ಹೆಚ್ಚು ಮಾಹಿತಿಯನ್ನು ನೀಡಲು ಈಗಾಗಲೇ ನಿರ್ದೇಶನ ನೀಡಲಾಗಿದೆ. ಜಯಂತಿ ಕುರಿತು ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ಜೂನ್ ೨೭ರಂದು ಬೆಳಗ್ಗೆ ೧೧ ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕೆಂಪೇಗೌಡರ ಕುರಿತು ಮಾತನಾಡಲು ಸಂಪನ್ಮೂಲ ವ್ಯಕ್ತಿಗಳು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿಯ ಇಲಾಖೆ ಉಪನಿರ್ದೇಶಕ ಡಾ.ರಮೇಶ್ ಉಪಸ್ಥಿತರಿದ್ದರು.