Oplus_16908288 
ಜಿಲ್ಲೆ

ಕೆರೆ, ಕಟ್ಟೆಗಳ ಅಭಿವೃದ್ಧಿಗೆ ಕೆಂಪೇಗೌಡರ ಕೊಡುಗೆ ಅಪಾರ

ನಂಜನಗೂಡು: ಕೆರೆ-ಕಟ್ಟೆಗಳ ಅಭಿವೃದ್ಧಿಗೆ ಕೆಂಪೇಗೌಡರ ಕೊಡುಗೆ ಅಪಾರ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.ನಗರದ ತಾಲೂಕು ಆಡಳಿತ ಭವನದಲ್ಲಿ ಶುಕ್ರವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು.

ಬೆಂಗಳೂರು ನಗರ ಇಂದು ಸಿಲಿಕಾನ್ ಸಿಟಿಯಾಗಿದೆ ಎಂದರೆ ಅದಕ್ಕೆ ಕೆಂಪೇಗೌಡರೇ ಕಾರಣ. ಕೆರೆ ಕಟ್ಟೆಗಳ ಅಭಿವೃದ್ಧಿಪಡಿಸಿ ಸಮಾಜಕ್ಕೆ ತಮ್ಮದೆ ಆದ ಕೊಡುಗೆ ನೀಡಿದ್ದಾರೆ ಎಂದರು. ನಂಜನಗೂಡು ತಾಲೂಕಿನಲ್ಲಿ ಒಕ್ಕಲಿಗರ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಜತೆ ಮಾತನಾಡಿ, ಹೆಚ್ಚಿನ ಅನುದಾನ ತಂದು ಸಮುದಾಯ ಭವನ ನಿರ್ಮಾಣಕ್ಕೆ ಬದ್ಧನಾಗಿದ್ದೇನೆ ಎಂದರು.ನಗರಸಭಾ ಅಧ್ಯಕ್ಷ ಶ್ರೀಕಂಠ, ಉಪಾಧ್ಯಕ್ಷೆ ರಿಯಾನಾ ಬಾನು, ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ಜೆರಾಲ್ಡ್ ರಾಜೇಶ್, ಗ್ಯಾರಂಟಿ ಸಮಿತಿಯ ಅಧ್ಯಕ್ಷ ಮಾರುತಿ, ನರಸಿಂಹಮೂರ್ತಿ, ಕೃಷ್ಣಪ್ಪಗೌಡ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.