ಜಿಲ್ಲೆ

ಕೇರಳ ಲಾಟರಿ ಮಾರಾಟಗಾರನ ಬಂಧನ

ಸುನಿಲ್ ಪೊನ್ನೇಟಿ

ಮಡಿಕೇರಿ:

ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪ ಕೇರಳ ರಾಜ್ಯ ಲಾಟರಿಯನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕೊಡಗು ಜಿಲ್ಲಾ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತನನ್ನು ಸುಂಟಿಕೊಪ್ಪ ನಿವಾಸಿ ಲತೀಫ್ (40) ಎಂದು ಗುರುತಿಸಲಾಗಿದೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತನಿAದ ತಲಾ ರೂ. 40 ಮೌಲ್ಯದ 1800ರಷ್ಟು ಲಾಟರಿ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಡಿವೈಎಸ್‌ಪಿ ರವಿ, ಡಿಸಿಆರ್‌ಬಿ ಪಿಐ ಮೇದಪ್ಪ ಐಪಿ, ಸೆನ್ ಪೊಲೀಸ್ ಠಾಣೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮನೆಯ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಅನುಮಾನಸ್ಪದ ವ್ಯಕ್ತಿಗಳು ಹಾಗೂ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಕಂಡುಬAದಲ್ಲಿ ಸ್ಥಳೀಯ ಪೊಲೀಸ್ ಠಾಣೆ, ತುರ್ತು ಸಹಾಯವಾಣಿ ಸಂಖ್ಯೆ 112ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಎಸ್‌ಪಿ ಕೆ. ರಾಮರಾಜನ್ ಕೋರಿದ್ದಾರೆ.