ಕಾಸರಗೋಡು: ಕನ್ನಡ ಶಾಲೆಯ ಉಳಿವಿನಲ್ಲಿ ಕನ್ನಡಿಗ ಪಾಲಕರು ಶಿಕ್ಷಕರಷ್ಟೇ ಜವಾಬ್ದಾರಿ ಹೊಂದಿದ್ದಾರೆ ಎಂದು ಕಸಾಪ ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಹೇಳಿದರು.
ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಗ್ರಂಥಾಲಯದಲ್ಲಿ ನಡೆದ ಕೇರಳ-ಕರ್ನಾಟಕ ಸ್ಪಂದನ ಸಿರಿ ಕೃಷಿ, ಕನ್ನಡ ಶಿಕ್ಷಣ ಮತ್ತು ಸಂಸ್ಕೃತಿ ಸಮ್ಮೇಳನದಲ್ಲಿ, ‘ಸರ್ಕಾರಿ ಕನ್ನಡ ಶಾಲೆಗಳ ಉಳಿವಿನಲ್ಲಿ ಶಿಕ್ಷಕರ ಪಾತ್ರ’ ಎಂಬ ವಿಷಯ ಕುರಿತು ಮಾತನಾಡಿದರು. ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷ ಪಿ.ಬಿ.ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡಿಗರ ಮಕ್ಕಳು ಶಿಕ್ಷಣಕ್ಕಾಗಿ ಕನ್ನಡ ಶಾಲೆಗಳಿಗೆ ಸೇರ್ಪಡೆಯಾದರೆ ಮಾತ್ರ ಕನ್ನಡ ಶಾಲೆಗಳನ್ನು ಉಳಿಸಲು ಸಾಧ್ಯ ಎಂದು ಹೇಳಿದರು.22
ನಿವೃತ್ತ ಜಿಲ್ಲಾ ಶಿಕ್ಷಣಾಧಿಕಾರಿ ಲಲಿತಾಲಕ್ಷ್ಮೀ ಕುಳಮರ್ವ ಸಂವಾದಕರಾಗಿದ್ದರು. ಬದಿಯಡ್ಕದ ಶ್ರೀಭಾರತೀ ವಿದ್ಯಾಪೀಠದ ಮುಖ್ಯ ಶಿಕ್ಷಕ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ಉಪಸ್ಥಿತರಿದ್ದರು. ಗಿರಿಜ ವಿಜಯನಗರ ಸ್ವಾಗತಿಸಿದರು. ಹಿತೇಶ್ ಕುಮಾರ ನೀರ್ಚಾಲ್ ನಿರೂಪಿಸಿದರು. ಭಾಗ್ಯಲಕ್ಷ್ಮೀ ವಿಜಯನಗರ ವಂದಿಸಿದರು.