ಜಿಲ್ಲೆ

ಕಾರು ಪಲ್ಟಿ ಕೇರಳ ವ್ಯಕ್ತಿ ಸಾವು

ಗಂಗಾಧರ ಬಿ ವಿ

ಚನ್ನಪಟ್ಟಣ

ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ವ್ಯಕ್ತಿಯೊರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಬೈರಾಪಟ್ಟಣ ಗ್ರಾಮದ ಬಳಿಯ ಬೆಂಗಳೂರು ಮೈಸೂರು ದಶಪಥಯಲ್ಲಿ ಗುರುವಾರ ಸಂಜೆ ನಡೆದಿದೆ.

ಕೇರಳ ಮೂಲದ ಅನಥ್ (35) ಮೃತ. ಈತ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಎನ್ನಲಾಗಿದ್ದು, ಬೈರಾಪಟ್ಟಣ ಗ್ರಾಮದ ಬಳಿಯ ಬಮುಲ್ ಹಾಲು ಶಿಥಲೀಕರಣ ಕೇಂದ್ರದ ಮುಂಭಾಗ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಈ ಹಿನ್ನೆಲೆಯಲ್ಲಿ ಈತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈತನ ತಲೆ ಸಂಪೂರ್ಣವಾಗಿ ಜಜ್ಜಿ ಹೋಗಿದೆ. ಸ್ಥಳಕ್ಕೆ ಸಂಚಾರಿ ಪಿಎಸ್ ಐಗಳಾದ ಶುಭಾಂಬಿಕಾ ಹಾಗೂ ಪಾಂಡು ತೆರಳಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ