ಮೂಲ್ಕಿ: ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸುವುದರ ಜತೆಗೆ ಕೃಷಿ ಚಟುವಟಿಕೆಗಳಿಗೆ ಯುವ ಜನತೆ ಉತ್ತೇಜನ ನೀಡಬೇಕು. ಶಿಮಂತೂರು ಯುವಕ ಮಂಡಲದ ಸದಸ್ಯರು ಸಾಮಾಜಿಕ ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆ ಸ್ತುತ್ಯರ್ಹ ಎಂದು ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಹೇಳಿದರು.
ಶಿಮಂತೂರು ಯುವಕ ಮಂಡಲದ ಆಶ್ರಯದಲ್ಲಿ ನಾಲ್ಕನೇ ವರ್ಷದ ಕೆಸರ್‌ಡೊಂಜಿ ದಿನ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕೆಸರ್‌ಡೊಂಜಿ ದಿನ ಕಾರ್ಯಕ್ರಮದ ಸ್ಪರ್ಧೆಗಳಲ್ಲಿ ಭಾಗವಹಿಸಿ, ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಯುವಕ ಮಂಡಲದ ಅಧ್ಯಕ್ಷ ದೀಪಕ್ ಅಧ್ಯಕ್ಷತೆ ವಹಿಸಿದ್ದರು. ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಡಾ.ಚಂದ್ರಶೇಖರ್ ಬಲೆಪು, ಅಂಗರಗುಡ್ಡೆ ಶ್ರೀರಾಮ ಭಜನಾ ಮಂಡಳಿ ಅಧ್ಯಕ್ಷ ಸಂಪತ್ ಕುಮಾರ್, ಮಾಜಿ ಅಧ್ಯಕ್ಷ ತಾರಾನಾಥ ದೇವಾಡಿಗ, ಉದ್ಯಮಿ ಗೋಪಾಲಕೃಷ್ಣ ಪುನರೂರು, ಶ್ರೀಶ ಸರಾಫ್ ಐಕಳ, ಯುವಕ ಮಂಡಲದ ಉಪಾಧ್ಯಕ್ಷ ಸಚಿನ್ ಮತ್ತಿತರರು ಉಪಸ್ಥಿತರಿದ್ದರು. ಯುವಕ ಮಂಡಲದ ಚಿತ್ತರಂಜನ್ ಸ್ವಾಗತಿಸಿದರು. ನೂತನ್ ವಂದಿಸಿದರು. ಟಿವಿ ನಿರೂಪಕ ನವೀನ್ ಶೆಟ್ಟಿ ಎಡ್ಮೆಮಾರ್ ನಿರೂಪಿಸಿದರು.