ಗುರುಪುರ: ವಿದ್ಯಾರ್ಥಿಗಳಿಗೆ ಶಾಲಾ ಕೊಠಡಿಯೊಳಗಿನ ಶಿಕ್ಷಣದ ಜತೆಗೆ ಪರಿಸರ ಪ್ರಜ್ಞೆ ಮೂಡಿಸುವ ಕಾರ್ಯಕ್ರಮಗಳ ಆಯೋಜನೆ ಅಗತ್ಯವಿದೆ. ಭೂಮಿ ತಾಯಿಯ ಮಡಿಲಲ್ಲಿ ಕೆಸರಿನೊಂದಿಗೆ ಕಳೆಯುತ್ತ, ರೈತಾಪಿ ವರ್ಗಗಳ ಬದುಕು ಅರಿಯಲು ಇದೊಂದು ಉತ್ತಮ ಅವಕಾಶ ಎಂದು ಶಾರದಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್ ಹೇಳಿದರು.
ಮೂಡುಶೆಡ್ಡೆಯ ಶಾರದಾ ಶುಭೋದಯ ವಿದ್ಯಾಲಯ ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ ಬುಧವಾರ ಆದ್ಯಪಾಡಿಯ ಶ್ರೀ ಆದಿನಾಥೇಶ್ವರ ದೇವಸ್ಥಾನದ ಬಳಿಯ ಗದ್ದೆಯಲ್ಲಿ ಏರ್ಪಡಿಸಿ ಕೆಸರುಗದ್ದೆ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಶಾರದಾ ಶಿಕ್ಷಣ ಸಂಸ್ಥೆ ನಿರ್ದೇಶಕ ಸಮೀರ್ ಪುರಾಣಿಕ್, ಉಪ ಪ್ರಾಂಶುಪಾಲರಾದ ಗೋಪಾಲಕೃಷ್ಣ, ರವೀಂದ್ರ ದರ್ಬೆ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗಾಗಿ ಹಗ್ಗಜಗ್ಗಾಟ, ವಾಲಿಬಾಲ್, ಥ್ರೋಬಾಲ್, ರಿಲೇ ಮತ್ತಿತರ ಸ್ಪರ್ಧೆ ಆಯೋಜಿಸಲಾಗಿತ್ತು.
ನಿವೇದಿತಾ ಮತ್ತು ಮೇರಿ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಪೂರ್ಣಿಮಾ ಮತ್ತು ಲೋಹಿತ್ ನಿರ್ವಹಿಸಿದರು. ಸಂಸ್ಥೆಯ ಶಿಕ್ಷಕ ಹಾಗೂ ಶಿಕ್ಷಕೇತರ ವರ್ಗ ಸಹಕರಿಸಿದರು.