ಕೊಳ್ಳೇಗಾಲ: ತಾಲೂಕಿನ ಉತ್ತಂಬಳ್ಳಿ ಗ್ರಾಮದ ಹೆದ್ದಾರಿ ಫ್ಲೈ ಓವರ್ ಬಳಿ ಗಾಂಜಾ ಮಾರಾಟ ಮಾಡಲು ಮುಂದಾಗಿದ್ದವನನ್ನು ಸೋಮವಾರ ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯ ಪೊಲೀ ಸರು ಬಂಧಿಸಿದ್ದಾರೆ.
ಹನೂರು ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದ ಕೆಂಪರಾಜು ಬಂಧಿತ ಆರೋಪಿ. ಈತ ಮಾರಾಟ ಮಾಡುವ ಉದ್ದೇಶದಿಂದ ಉತ್ತಂಬಳ್ಳಿ ಹೆದ್ದಾರಿ ಫ್ಲೈ ಓವರ್ ಕೆಳಗೆ ಗಾಂಜಾವನ್ನು ಮಾರಾಟ ಮಾಡಲು ಮುಂದಾಗಿದ್ದನು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಕರಿಬಸಪ್ಪ ತಂಡ ದಾಳಿ ನಡೆಸಿ 230 ಗ್ರಾಂ ತೂಕದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.