ಜಿಲ್ಲೆ

8ರಿಂದ ಖಾದಿ ವಸ್ತು ಪ್ರದರ್ಶನ, ಮಾರಾಟ ಮೇಳ

ವಿಜಯಪುರ : ಜಿಲ್ಲಾಡಳಿತ, ಜಿ.ಪಂ., ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸೆ. 8 ರಿಂದ ಸೆ. 17ರವರೆಗೆ ನಗರದ ಇಂಡಿ ರಸ್ತೆಯಲ್ಲಿರುವ ಚಾಂದನಿ ಫಂಕ್ಷನ್​ ಹಾಲ್​ನಲ್ಲಿ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ನಡೆಯಲಿದೆ.

ಸೆ. 8 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನೆ ನೆರವೇರಿಸುವರು. ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಮಳಿಗೆ ಉದ್ಘಾಟನೆ ಹಾಗೂ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಬಸನಗೌಡ ತುರವಿಹಾಳ ಪ್ರಾತ್ಯಕೆ ಉದ್ಘಾಟನೆ ಮಾಡುವರು. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಕೃಷಿ ಮಾರುಕಟ್ಟೆಯ ಸಚಿವ ಶಿವಾನಂದ ಪಾಟೀಲ, ವಿ.ಪ. ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ ಎನ್​., ನವದೆಹಲಿಯ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಕೆಎಸ್​ಡಿ ನಿಗಮದ ಅಧ್ಯಕ್ಷ ಅಪ್ಪಾಜಿ ನಾಡಗೌಡ, ಜಿಲ್ಲೆಯ ಜನಪತ್ರಿನಿಧಿಗಳು, ಅಧಿಕಾರಿಗಳು ಮತ್ತಿತರರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.