ಜಿಲ್ಲೆ

ವಸ್ತು ಪ್ರದರ್ಶನ, ಮಾರಾಟ ಮೇಳ ಖಾದಿ ಉತ್ಸವ ನ.26 ರಿಂದ

ಬಾಬುರಾವ ಯಡ್ರಾಮಿ
ಯಾದಗಿರಿ :    ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೊಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳ ಖಾದಿ ಉತ್ಸವವನ್ನು ಯಾದಗಿರಿy ಹೈದ್ರಾಬಾದ್ ರಸ್ತೆ ಶುಭಂ ಪೆಟ್ರೋಲ್ ಬಂಕ್ ಹತ್ತಿರ ತುನ್ನೂರ ಕಾಂಪೌ0ಡ್‌ದಲ್ಲಿ 2024ರ ನವೆಂಬರ್ 26 ರಿಂದ 2024ರ ಡಿಸೆಂಬರ್ 10ರ ವರೆಗೆ ಬೆಳಿಗ್ಗೆ 10 ರಿಂದ ರಾತ್ರಿ 9ರ ವರೆಗೆ ಹಮ್ಮಿಕೊಳ್ಳಲಾಗಿದೆ. ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ Shaರಣಬಸಪ್ಪ ದರ್ಶನಾಪೂರ ಅವರು ಕಾರ್ಯಕ್ರಮ ಉದ್ಘಾಟಿಸುವರು.
ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಛಲವಾದಿ ಟಿ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ನೆರವೇರಿಸುವರು.ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾದ ಆರ್.ಬಸನಗೌಡ ತುರುವಿಹಾಳ ಪ್ರಾತ್ಯಕ್ಷತೆ ಉದ್ಘಾಟಕರು, ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅಧ್ಯಕ್ಷತೆ ವಹಿಸುವರು. ರಾಯಚೂರು ಲೋಕಸಭಾ ಸದಸ್ಯರು ಜಿ.ಕುಮಾರ ನಾಯಕ, ಕಲಬುರಗಿ ಲೋಕಸಭಾ ಸದಸ್ಯರಾಧಾಕೃಷ್ಣ ದೊಡ್ಡಮನಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ವಿಧಾನ ಪರಿಷತ್ತು ಸದಸ್ಯರಾಧ ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ, ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ರಾಜಾ ವೇಣುಗೋಪಾಲ ನಾಯಕ, ಯಾದಗಿರಿ ನಗರಸಭೆ ಅಧ್ಯಕ್ಷರು ಕುಮಾರಿ ಲಲಿತಾ ಅನಪೂರ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ವಿನಾಯಕ ಮಾಲಿ ಪಾಟೀಲ್ ಅತಿಥಿಗಳಾಗಿ ಪಾಲ್ಗೊಳ್ಳುವರು.
ಯಾದಗಿರಿ ವಕ್ಛ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳು ಹಾಗೂ  ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಶ್ರೀ ಮನೋಜ್ ಜೈನ್, ಬೆಂಗಳೂರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಶ್ರೀ ಸೆಲ್ವಕುಮಾರ, ಕಲಬುರಗಿ ವಿಭಾಗ ಪ್ರಾದೇಶಿಕ ಆಯುಕ್ತರು ಶ್ರೀ ಕೃಷ್ಣಾ ಭಾಜಪೇಯಿ, ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ, ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಲವೀಶ್ ಒರಡಿಯಾ, ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಪೃಥ್ವಿಕ್ ಶಂಕರ್, ಹುಬ್ಬಳ್ಳಿ ಖಾದಿ ಗ್ರಾಮೋದ್ಯೋಗ ಆಯೋಗ ವಿಭಾಗೀಯ ನಿರ್ದೇಶಕರು ಬಸವರಾಜ, ಬೆಂಗಳೂರು ಕರ್ನಾಟಕ ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ವಿ.ಟಿ.ವೆಂಕಟೇಶ ವಿಶೇಷ ಆಹ್ವಾನಿತರಾಗಿ ಆಗಮಿಸುವರು.
ಕಾರ್ಯಕ್ರಮಕ್ಕೆ ಜಿಲ್ಲಾ ಸಮಸ್ತ ಜನರು ಯಾದಗಿರಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಶ್ರೀಮತಿ ಮನೀಶ ಸಿ.ಹೆಚ್, ಯಾದಗಿರಿ ಜಿಲ್ಲಾ ಕೈಗಾರಿಕೆ ಕೇಂದ್ರ ಜಂಟಿ ನಿರ್ದೇಶಕರು ಬಿ.ಸತೀಶ್‌ಕುಮಾರ ಪ್ರಕಟಣೆ ಕೋರಿದೆ.