ಜಿಲ್ಲೆ

ಖೇಲ್ ಮಹೋತ್ಸವ್ ನೋಂದಣಿಗೆ ಚಾಲನೆ

ಇಂದಿರಾ ಎನ್ ಕೆ

ವಿಜಯವಾಣಿ ಸುದ್ದಿಜಾಲ ಬೈಂದೂರು

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಸಂಸದ್ ಖೇಲ್ ಮಹೋತ್ಸವ್-2025 ನೋಂದಣಿ ಪ್ರಕ್ರಿಯೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ಸಂಸದ ಬಿ.ವೈ ರಾಘವೇಂದ್ರ ಮಂಗಳವಾರ ಚಾಲನೆ ನೀಡಿದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಂಸದ ರಾಘವೇಂದ್ರ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 2030ರಲ್ಲಿ ಕಾಮನ್ ವೇಲ್ತ್ ಗೇಮ್ಸ್, 2036ರಲ್ಲಿ ಒಲಿಂಪಿಕ್ ಗೇಮ್ಸ್ ಆಯೋಜಿಸಲು ಈಗಾಗಲೇ ಪೂರ್ವ ತಯಾರಿ ಮಾಡಿಕೊಂಡಿದೆ. ಖೇಲೋ ಇಂಡಿಯಾ ಹಾಗೂ ಫಿಟ್ ಇಂಡಿಯಾ ಯೋಜನೆ ಜಾರಿಗೊಳಿಸಿ ನಗರ ಹಾಗೂ ಗ್ರಾಮೀಣ ಭಾಗದ ಲಕ್ಷಾಂತರ ಕ್ರೀಡಾಪಟುಗಳ ಮುನ್ನೆಲೆಗೆ ತರುವ ಉದ್ದೇಶ ಕೇಂದ್ರ ಸರ್ಕಾರದ್ದಾಗಿದೆ ಎಂದರು.

ಶಾಸಕ ಗುರುರಾಜ ಗಂಟಿಹೊಳೆ, ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ., ಕಾರ್ಯದರ್ಶಿ ಕರಣ್ ಪೂಜಾರಿ, ಗೋಪಾಲ ಪೂಜಾರಿ, ಜಿಪಂ ಮಾಜಿ ಸದಸ್ಯ ಸುರೇಶ ಬಟ್ವಾಡಿ, ರೈತ ಸಂಘ ಅಧ್ಯಕ್ಷ ನೆಲ್ಯಾಡಿ ದೀಪಕ್‌ಕುಮಾರ್ ಶೆಟ್ಟಿ ಇದ್ದರು.

ಹಾಕಿ ದಿಗ್ಗಜ ಧ್ಯಾನ್‌ಚಂದ್ ಅವರ ಜನ್ಮದಿನವನ್ನು ಕ್ರೀಡಾದಿನ ಎಂದು ಘೋಷಿಸಿ ದೇಶದಾದ್ಯಂತ ಕ್ರೀಡಾಸಕ್ತರ ನೋಂದಣಿ ಪ್ರಕ್ರಿಯೆಗೆ ಪ್ರಧಾನಿ ಚಾಲನೆ ನೀಡಿದ್ದಾರೆ. ಇದರಲ್ಲಿ ಮೂರು ವಿಭಾಗಗಳಿದ್ದು, ಗ್ರಾಮ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡಿದೆ. ಇದಕ್ಕೆ ಸಂಬಂಧಿಸಿದ ಪೋರ್ಟ್‌ಲ್‌ನಲ್ಲಿ ಕ್ರೀಡಾಪಟುಗಳು ತಮ್ಮ ಹೆಸರನ್ನು ನೊಂದಾಯಿಸಬಹುದು. -ಬಿ.ವೈ.ರಾಘವೇಂದ್ರ ಸಂಸದ