ಚಾಮರಾಜನಗರ: ಚಿತ್ರ ನಿರ್ಮಾಪಕ ಕುಮಾರ್ ಹಾಗೂ ಸುರೇಶ್ ವಿರುದ್ಧ ಕಿಚ್ಚ ಸುದೀಪ್ ಅಭಿಮಾನಿ ದೂರು ಸಲ್ಲಿಸಿದ್ದಾರೆ.
ನಗರದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಆಲ್ ಇಂಡಿಯಾ ಬಾದ್ ಷಾ ಕಿಚ್ಚ ಸುದೀಪ್ ಫ್ಯಾನ್ಸ್ ಅಸೋಸಿಯೇಷನ್ ಅಧ್ಯಕ್ಷ ನಾಗೇಂದ್ರ ಬುಧವಾರ ದೂರು ನೀಡಿದ್ದಾರೆ.
ಚಿತ್ರನಟ ಕಿಚ್ಚ ಸುದೀಪ್ ವಿರುದ್ದ ಬೆಂಗಳೂರು ಮೂಲದ ನಿರ್ಮಾಪಕ ಎಂ.ಎನ್ .ಕುಮಾರ್ ಹಾಗೂ ಎಂ.ಎನ್.ಸುರೇಶ್ ಸುಳ್ಳು ಸುದ್ದಿ ಹಾಗೂ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಾ ನಟ ಸುದೀಪ್ ಗೆ ಮಾನಹಾನಿ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿ ನಿರ್ಮಾಪಕರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.
ಕಿಚ್ಚ ಸುದೀಪ್ ಹಾಗೂ ನಿರ್ಮಾಪಕ ಎಂಎನ್ ಕುಮಾರ್ ನಡುವಿನ ಜಟಾಪಟಿ ಮುಂದುವರೆದಿದೆ. ಹಣ ಪಡೆದು ಸುದೀಪ್ ಅವರು ಸಿನಿಮಾ ಮಾಡಿಲ್ಲ ಎನ್ನುವ ಆರೋಪವನ್ನು ಮಾಡಿದ್ದಾರೆ. ಕಿಚ್ಚ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಇತ್ತ ನಿರ್ಮಾಪಕ ಕುಮಾರ್ ಫಿಲ್ಮ್ ಚೇಂಬರ್ ಮುಂದೆ ಪ್ರತಿಭಟನೆಗೆ ಮುಂದಾಗಿದ್ದಾರೆ. ಕುಮಾರ್‌ಗೆ ಕನ್ನಡ ಚಿತ್ರರಂಗದ ಕೆಲವು ನಿರ್ಮಾಪಕರು ಬೆಂಬಲ ವ್ಯಕ್ತಪಡಿಸಿದ್ದಾರೆ.