ಜಿಲ್ಲೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ  ಆದ್ಯಾ ಅವರಿಗೆ ಎರಡು ಚಿನ್ನ

Mangaluru - Prakash MC Manjeshwar

ಮಂಗಳೂರು: ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಕಳೆದ ಜುಲೈ 15 ಮತ್ತು 16ರಂದು ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ನಡೆಸಿದ 3ನೇ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್  ಸ್ಪರ್ಧೆಯಲ್ಲಿ  ದಕ್ಷಿಣ ಕನ್ನಡ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಸಂಸ್ಥೆಯ ಕ್ರೀಡಾಪಟು ಕು.ಆದ್ಯಾ. ಎ  ಸಬ್- ಜೂನಿಯರ್ ವಿಭಾಗದ ಪಾಯಿಂಟ್ ಫೈಟ್ ಮತ್ತು ಕಿಕ್ ಲೈಟ್ ವಿಭಾಗದಲ್ಲಿ 2 ಚಿನ್ನದ ಪದಕ ಗಳಿಸಿದ್ದಾರೆ.
 ಈ ಮೂಲಕ ಈಕೆ ಆಗಸ್ಟ್ ತಿಂಗಳು ಜಾರ್ಖಂಡ್‌ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ಗೆ ಅರ್ಹತೆ ಪಡೆದಿದ್ದಾರೆ.  ಇವರು ಐಕೆಎಂಎ ಸಂಸ್ಥೆಯ ವಿದ್ಯಾರ್ಥಿನಿ ಆಗಿದ್ದು, ಸಂಸ್ಥೆಯ ಮುಖ್ಯ ಶಿಕ್ಷಕ ನಿತಿನ್ ಎನ್ ಸುವರ್ಣ ಮತ್ತು ಶಿಕ್ಷಕ ಸಂಪತ್ ಕುಮಾರ್ ಇವರಿಂದ ತರಬೇತಿ ಪಡೆಯುತ್ತಿದ್ದಾರೆ.