ಅಥಣಿ ಗ್ರಾಮೀಣ: ಅಥಣಿ ತಾಲೂಕಿನ ಮಹಿಷವಾಡಗಿ ಗ್ರಾಮದ ವೈದ್ಯ ಹಾಗೂ ಪದ್ಮಾವತಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಡಾ.ಆನಂದ ಚಿಂತಾಮಣಿ ಉಪಾಧ್ಯಾ ಅವರನ್ನು ಅಪಹರಿಸಿ ಚಿತ್ರಹಿಂಸೆ ನೀಡಿ, ಹಲ್ಲೆ ಮಾಡಿರುವ ಘಟನೆ ನಡೆದಿದ್ದು, ಈ ಸಂಬಂಧ ಎಂಟು ಜನರ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಲಪ್ಪ ತೇಲಿ ಸೇರಿ ಅವರ ಕುಟುಂಬದ ಎಂಟು ಜನರು ಬಂದು ಪದ್ಮಾವತಿ ಇಂಟರ್ ನ್ಯಾಶನಲ್ ಸ್ಕೂಲ್ ಆವರಣದಲ್ಲಿ ಜು.10ರಂದು ಡಾ.ಆನಂದ ಅವರನ್ನು ಅಪಹರಣ ಮಾಡಿದ್ದಾರೆ ಎಂದು ರನ್ನಕುಮಾರ ಉಪಾಧ್ಯಾ ದೂರು ದಾಖಲಿಸಿದ್ದರು.
ಈ ವಿಷಯ ತಿಳಿದು ಅಪಹರಣಕಾರರು ಆನಂದನನ್ನು ಶುಕ್ರವಾರ ಬಿಡುಗಡೆ ಮಾಡಿದ್ದಾರೆ. ಗಾಯಗೊಂಡ ವೈದ್ಯ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ ಎಂದು ಅಥಣಿ ಪೊಲೀಸರು ತಿಳಿಸಿದ್ದಾರೆ.