ಜಿಲ್ಲೆ

ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಹಾವೇರಿ: ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ಶಿವಾಜಿ ನಗರದಲ್ಲಿ ಬುಧವಾರ ನಡೆದಿದೆ.

ಶ್ರೀಧರ ಮಾರುತಿ ಅಂಚಿ (31) ಮೃತ ವ್ಯಕ್ತಿ.

ಈತ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ. ಆಸ್ಪತ್ರೆಗೆ ತೋರಿಸಿದರೂ ಗುಣವಾಗದ ಕಾರಣ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.