ಜಿಲ್ಲೆ

ಪಿಕ್‌ಅಪ್ ವಾಹನ ಡಿಕ್ಕಿ ಸಾವು

ಇಂದಿರಾ ಎನ್ ಕೆ

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೊಪ್ಪಲಂಗಡಿ ಬಳಿ ಪಿಕ್‌ಅಪ್ ವಾಹನ ಡಿಕ್ಕಿಯಾಗಿ ಶಂಶುದ್ದೀನ್ ಮಹಮ್ಮದ್ ಆಲಿ ಸಾಹೇಬ್ ಎಂಬುವರು ಶನಿವಾರ ಮೃತಪಟ್ಟಿದ್ದಾರೆ. ಅಪಘಾತದಿಂದ ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.