ತುಂಗಾನಗರ ಠಾಣೆ  
ಜಿಲ್ಲೆ

ಟಿಪ್ಪುನಗರದಲ್ಲಿ ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ

ನವೀನ ಬಿ.ಎಂ

ಶಿವಮೊಗ್ಗ: ಟಿಪ್ಪುನಗರದಲ್ಲಿ ಅಪರಿಚಿತ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

65 ವರ್ಷದ ವ್ಯಕ್ತಿ ಮೃತಪಟ್ಟಿದ್ದು ಮೇಲ್ನೋಟಕ್ಕೆ ಭಿಕ್ಷುಕನಂತೆ ಕಂಡುಬರುತ್ತಿದ್ದಾರೆ. ಶನಿವಾರ ಬೆಳಗಿನ ಜಾವ ಕೃತ್ಯ ನಡೆದಿದೆ. ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಮತ್ತು ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ತುಂಗಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.