ಜಿಲ್ಲೆ

ಕಿಮ್ಸ್​ ಹಳೆಯ ಕಟ್ಟಡ ಸುಧಾರಿಸಲು ಒತ್ತಾಯ

ಮರಿದೇವ ಹೂಗಾರ

ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಅವರು ಇಲ್ಲಿನ ಕಿಮ್ಸ್​ಗೆ ಶನಿವಾರ ಭೇಟಿ ನೀಡಿ, ಪರಿಶೀಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೆಯ ಕಟ್ಟಡದಲ್ಲಿ ಸುಧಾರಿತ ಕೆಲಸಗಳು ನಡೆಯಬೇಕಿದೆ. ಕೆಲ ವಾರ್ಡ್​ಗಳಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲಿ ಗುಣಮಟ್ಟದ ವೈದ್ಯಕೀಯ ಉಪಕರಣಗಳಿವೆ. ಈ ರೀತಿ ಹಳೆಯ ಕಟ್ಟಡದಲ್ಲಿಯೂ ಆಗಬೇಕಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸುವುದಾಗಿ ತಿಳಿಸಿದರು. ಅನಾಥ ಮಗು ಸಾಕುತ್ತಿರುವ ಕಿಮ್್ಸ ಸಿಬ್ಬಂದಿ ನಡೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮಾರ ಚವ್ಹಾಣ, ಪ್ರಾಚಾರ್ಯ ಡಾ. ಈಶ್ವರ ಹೊಸಮನಿ, ಡಾ. ರಾಜಶೇಖರ ದ್ಯಾಬೇರಿ ಇತರರು ಇದ್ದರು.