ಕಿಶೋರಿ ಮಾಹಿತಿ ಕಾರ್ಯಾಗಾರ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.  
ಜಿಲ್ಲೆ

ಕಿಶೋರಿ ಮಾಹಿತಿ ಕಾರ್ಯಾಗಾರ

ಇಂದಿರಾ ಎನ್ ಕೆ

ಗಂಗೊಳ್ಳಿ: ರೋಟರಿ ಕ್ಲಬ್ ಆಶ್ರಯದಲ್ಲಿ ಕಿಶೋರಿ ಮಾಹಿತಿ ಕಾರ್ಯಾಗಾರ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆಯಿತು.

ಎಸ್‌ಡಿಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ, ಪತ್ರಕರ್ತ ಬಿ.ರಾಘವೇಂದ್ರ ಪೈ ಶುಭಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಅಮಿತಾ ಮಾಹಿತಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಚರ್ಚೆ ನಡೆಸಿದರು.

ರೋಟರಿ ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ, ಎಸ್‌ಡಿಎಂಸಿ ಉಪಾಧ್ಯಕ್ಷೆ ರೇಣುಕಾ ಮೊಗವೀರ, ಸದಸ್ಯ ಅಶೋಕ ಪೂಜಾರಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಯಶೋದಾ ಸ್ವಾಗತಿಸಿದರು. ಶಿಕ್ಷಕಿ ಅನುಷಾ ಸಿ.ಬಂಗೇರ ನಿರ್ವಹಿಸಿದರು. ನಾಗರತ್ನ ವಂದಿಸಿದರು.