ಜಿಲ್ಲೆ

ರಾಣಿ ಚೆನ್ನಮ್ಮ ಭರತ ಖಂಡದ ಸ್ವಾಭಿಮಾನದ ಪ್ರತೀಕ

Uttara Kannada - Subash Hegde

ಕಾರವಾರ: ಕಿತ್ತೂರು ರಾಣಿ ಚೆನ್ನಮ್ಮ ಭರತ ಖಂಡದ ಸ್ವಾಭಿಮಾನದ ಪ್ರತೀಕ. ಅವರು ದೇಶಕ್ಕೆ ಸ್ವಾಭಿಮಾನದ ದಿಕ್ಸೂಚಿ ತೋರಿಸಿದ್ದಾರೆ. ಈ ದಿಕ್ಸೂಚಿಯಡಿ ನಾವೆಲ್ಲರೂ ನಡೆಯಬೇಕು ಎಂದು ಅಪರ ಜಿಲ್ಲಾಽಕಾರಿ ಸಾಜೀದ್ ಮುಲ್ಲಾ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ, ಸರ್ಕಾರಿ ಪದವಿಪೂರ್ವ ಕಾಲೇಜ್‌ನಲ್ಲಿ ಗುರುವಾರ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಚೆನ್ನಮ್ಮ ರವರ ಶೌರ್ಯ, ಧೈರ್ಯ, ಹೋರಾಟ, ದೇಶಭಕ್ತಿ ಮತ್ತು ಜೀವನ ಸಂದೇಶವನ್ನು ಎಲ್ಲರೂ ಪಾಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಯಮುನಾ ಗಾಂವಕರ್ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸತೀಶ ನಾಯ್ಕ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ರಾಮಾ ನಾಯ್ಕ, ಗೌರವ ಕಾರ್ಯದರ್ಶಿ ಜಿ.ಡಿ. ಮನೋಜ್, ಮಂಜುನಾಥ ಗುನಗಾ, ಸತೀಶ ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ ಸ್ವಾಗತಿಸಿದರು. ಶಿಕ್ಷಕಿ ವನಿತಾ ಶೇಟ ನಿರೂಪಿಸಿ, ವಂದಿಸಿದರು.