ಧಾರವಾಡ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಅ. 23ರಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ ವಿಶೇಷ ಅತಿಥಿಯಾಗಿ ಆಗಮಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿರುವರು. ಅತಿಥಿಗಳಾಗಿ ಶಾಸಕರಾದ ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್, ಅಬ್ಬಯ್ಯ ಪ್ರಸಾದ, ಎನ್.ಎಚ್ ಕೋನರಡ್ಡಿ, ಜಗದೀಶ ಶೆಟ್ಟರ್, ಎಸ್.ವಿ ಸಂಕನೂರ, ಪ್ರದೀಪ ಶೆಟ್ಟರ್, ಮೇಯರ್ ವೀಣಾ ಭರದ್ವಾಡ ಭಾಗವಹಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು. ಪ್ರಾಧ್ಯಾಪಕಿ ಡಾ. ಪುಷ್ಪಾ ಪಾಟೀಲ ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.