ಜಿಲ್ಲೆ

ಕಿತ್ತೂರು ರಾಣಿ ಚನ್ನಮ್ಮ ಜಯಂತಿ 23ರಂದು

ಧಾರವಾಡ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಅ. 23ರಂದು ಬೆಳಗ್ಗೆ 11.30ಕ್ಕೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್​ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರಾದ ವಿನಯ ಕುಲಕರ್ಣಿ, ಅಬ್ಬಯ್ಯ ಪ್ರಸಾದ, ಭರಮಗೌಡ ಅಲಗೌಡ ಕಾಗೆ, ಜೆ.ಎನ್​.ಗಣೇಶ, ಎನ್​.ಎಚ್​ ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಎಂ.ಆರ್​. ಪಾಟೀಲ್​, ಎಸ್​.ವಿ.ಸಂಕನೂರ, ಪ್ರದಿಪ ಶೆಟ್ಟರ, ಮೇಯರ್​ ರಾಮಪ್ಪ ಬಡಿಗೇರ, ನಿಗಮ ಮಂಡಳಿ ಅಧ್ಯಕ್ಷರು, ಪಾಲಿಕೆ ಸದಸ್ಯರು, ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್​ ಆಯುಕ್ತ ಎನ್​. ಶಶಿಕುಮಾರ, ಜಿಪಂ ಸಿಇಒ ಸ್ವರೂಪ ಟಿ.ಕೆ., ವಿವಿಧ ಇಲಾಖೆ ಅಧಿಕಾರಿಗಳು, ಇತರರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.