ಅಫಜಲಪುರ: ಸಾಲಬಾಧೆಯಿಂದಾಗಿ ಯುವ ರೈತನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಘೂಳನೂರ ಗ್ರಾಮದಲ್ಲಿ ಮಂಗಳವಾರ ಜರುಗಿದೆ.
ಘೂಳನೂರಿನ ದೇವಿಂದ್ರಪ್ಪ ಸುತಾರ (26) ಆತ್ಮಹತ್ಯೆಗೆ ಶರಣಾದವ. 4 ಎಕರೆ ಜಮೀನಿದ್ದು, ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 3 ಲಕ್ಷ ರೂ. ಹಾಗೂ ಖಾಸಗಿಯಾಗಿ 5 ಲಕ್ಷ ರೂ. ಸಾಲ ಮಾಡಿದ್ದ ಎನ್ನಲಾಗಿದೆ. ಬೆಳೆಯೂ ಸಮರ್ಪಕವಾಗಿ ಬಂದಿಲ್ಲ. ಅಲ್ಲದೆ ಸಾಲವೂ ಹೆಚ್ಚಾಗಿದ್ದರಿಂದ ಮನನೊಂದು ಮನೆಯಲ್ಲಿಯೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೆಪಿಸಿಸಿ ಸದಸ್ಯ ಅರುಣಕುಮಾರ ಪಾಟೀಲ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಸರ್ಕಾರದಿಂದ ಪರಿಹಾರ ಕಲ್ಪಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು. ಪಿಎಸ್‌ಐ ರಾಹುಲ್ ಪವಾಡೆ, ಮುಖ್ಯಪೇದೆ ಸಂಗಣ್ಣ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗಾಣಗಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.