ಕಲಬುರಗಿ: ಗುತ್ತಿಗೆದಾರ ಸಚಿನ ಪಾಂಚಾಳ ಆತ್ಮಹತ್ಯೆ ತನಿಖೆ ಆಗಬೇಕು, ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು, ಜಿಲ್ಲೆಯ ನಾಲ್ವರು ಪ್ರತಿಷ್ಠಿತ ವ್ಯಕ್ತಿಗಳ ಕೊಲೆಗೆ ಸಂಚು ರೂಪಿಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು... ಜಿಲ್ಲೆಯಲ್ಲಿ ರೌಡಿಸಂ ಆಡಳಿತ ನಡೆಸುವುದಕ್ಕೆ ತಡೆ ನೀಡಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ನಗರದಲ್ಲಿ ಭಾರತೀಯ ಜನತಾ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಜಗತ್ ವೃತ್ತದಲ್ಲಿ ಶನಿವಾರ ಬೆಳಗ್ಗೆ ೧೧ಗಂಟೆಯಿAದ ಮಧ್ಯಾಹ್ನ ೨ಗಂಟೆವರೆಗೆ ನಗರ, ಜಿಲ್ಲೆಯ ಸಾವಿರಾರು ಬಿಜೆಪಿ ಕಾರ್ಯಕರ್ತರು, ಮುಖಂಡರು ಆಗಮಿಸಿ ಕಾಂಗ್ರೆಸ್ ಸರ್ಕಾರ, ದರ್ಪ ತೋರಿಸುತ್ತಿರುವ ಪೊಲೀಸ್, ಗುಂಡಾ ರಾಜ್ಯ, ರೌಡಿಗಳ ಆಡಳಿತ, ಸಚಿವರ ಗುಂಡಾ ವರ್ತನೆ ಖಂಡಿಸಿ, ಘೋಷಣೆ ಕೂಗಿ ವಾಹನ ಸಂಚಾರ ತಡೆದು, ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಜಿ¯್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಿದ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು, ಬೀದರ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವ ಗುತ್ತಿಗೆದಾರ ಸಚಿನ ಪಾಂಚಾಳ ಡೆತ್‌ನೋಟ್‌ನಲ್ಲಿ ಆಂದೋಲಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಶಾಸಕ ಬಸವರಾಜ ಮತ್ತಿಮಡು, ಬಿಜೆಪಿ ಮುಖಂಡರಾದ ಚಂದು ಪಾಟೀಲ್, ಮಣಿಕಂಠ ರಾಠೋಡ ಹತ್ಯೆಗೆ ಕಾಂಗ್ರೆಸ್ ಮುಖಂಡರಾದ ರಾಜು ಕಪನೂರ, ನಂದಕುಮಾರ ನಾಗಭುಜಂಗೆ, ಗೋರಕನಾಥ ಸಜ್ಜನ, ಪ್ರತಾಪಧೀರ ಪಾಟೀಲ್, ಮನೋಜ ಶೇಜೆವಾಲ್, ರಾಮನಗೌಡ ಪಾಟೀಲ್ ಸಂಚು ರೂಪಿಸಿದ್ದಾರೆ ಎಂದು ಬರೆದಿದ್ದಾರೆ. ಅವರ ವಿರುದ್ಧ ದೂರು ಕೊಡಲು ಹೋದಾಗ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ಹಿಂದೇಟು ಹಾಕಿ, ಅಗೌರವದಿಂದ ವರ್ತಿಸಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿ ಕಾರಿದರು.
ಕೊಲೆ ಸಂಚು ರೂಪಿಸಿದವರ ವಿರುದ್ಧ ದೂರು ನೀಡಲು ಹೋದರೆ, ಶಾಸಕ ಬಸವರಾಜ ಮತ್ತಿಮಡು ಸೇರಿ ಬಿಜೆಪಿಯ ಮಾಜಿ ಶಾಸಕರು, ಮುಖಂಡರನ್ನು ಮೂರು ಗಂಟೆ ಕಾಯಿಸಿz್ದÁರೆ. ಶಾಸಕರ ಬಗ್ಗೆ ಏಕವಚನದಲ್ಲಿ ಮಾತನಾಡಿದ ಇನ್‌ಸ್ಪೆಕ್ಟರ್ ಶಕೀಲï ಅಂಗಡಿ ಅವರನ್ನು ಅಮಾನತು ಮಾಡಬೇಕು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವವರೆಗೆ ಪ್ರತಿಭಟನೆ ಹಿಂಪಡೆಯಲ್ಲ ಎಂದು ಪಟ್ಟು ಹಿಡಿದರು. ಸ್ಥಳಕ್ಕೆ ಆಗಮಿಸಿದ ಡಿಸಿಪಿ ಕನ್ನಿಕಾ ಸಿಕ್ರಿವಾಲ್ ಮನವಿ ಸ್ವೀಕರಿಸಿ, ಎಫ್‌ಐಆರ್ ಪ್ರತಿಯನ್ನು ಹೋರಾಟಗಾರರಿಗೆ ನೀಡಿ, ತನಿಖೆ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ಶಾಸಕ ಬಸವರಾಜ ಮತ್ತಿಮಡು, ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರz್ದÉÃವಾಡಗಿ, ಮಹಾನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಮಾಜಿ ಎಂಎಲ್‌ಸಿ ಅಮರನಾಥ ಪಾಟೀಲ್, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶಿವಾ ಅಷ್ಟಗಿ ಇತರರಿದ್ದರು.