ಕಮಲಾಪುರ: ಕೋಹಿನೂರು ಕಲ್ಯಾಣ ಮಂಟಪದಲ್ಲಿ ಮಂಗಳವಾರ ಬೆಳಗ್ಗೆ 10ಕ್ಕೆ ತಾಲೂಕು ಆಡಳಿತದಿಂದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಮಹಮ್ಮದ್ ಮೋಹಸಿನ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಎಸ್ಪಿ ಅಡ್ಡೂರು ಶ್ರೀನಿವಾಸುಲು, ಜಿಪಂ ಸಿಇಒ ಭಂವರಸಿAಗ್ ಮೀನಾ ಅವರು ಪಾಲ್ಗೊಳ್ಳಲಿದ್ದಾರೆ. ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದ್ದಾರೆ.