ಸೇಡಂ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ಹಾಗೂ ರೈತ ವಿರೋಧಿ ನೀತಿ ಖಂಡಿಸಿ ಪಟ್ಟಣದಲ್ಲಿ ಬಿಜೆಪಿಯಿಂದ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರ ಅನ್ನದಾತರಿಗಾಗಿ ಜಾರಿಗೆ ತಂದಿರುವ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸರ್ಕಾರ ಮೀನಾಮೇಶ ಎನಿಸುತ್ತಿದೆ. ಪಿಎಂ ಕಿಸಾನ್, ಕಿಸಾನ್ ಸಮ್ಮಾನ್ ಹಾಗೂ ಇನ್ನಿತರ ಯೋಜನೆಗಳಿಗೆ ನೇರವು ನೀಡುತ್ತಿಲ್ಲ. ಕಾಗಿನ ಏತ ನೀರಾವರಿ ಯೋಜನೆ ಬಗ್ಗೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ಮುಖಂಡರು ಹಾಗೂ ಕಾರ್ಯಕರ್ತರು ಕಿಡಿ ಕಾರಿದರು.
ಸಂಸದ ಡಾ.ಉಮೇಶ ಜಾಧವ, ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ, ಪ್ರಮುಖರಾದ ಶಿವಕುಮಾರ ಪಾಟೀಲ್ ತೆಲ್ಕೂರ, ಸಿದ್ದು ಬಾನರ್ ಹಾಗೂ ಸಾವಿರಾರು ಕಾರ್ಯಕರ್ತರು ಇದ್ದರು.