ಜಿಲ್ಲೆ

ಯಡ್ರಾಮಿ; ಕದಂಬ ಕಾಲೇಜಿನಲ್ಲಿ ಸರಣಿ ಉಪನ್ಯಾಸ ಇಂದು

ಕೃಷ್ಣ ಕುಲಕರ್ಣಿ

ಯಡ್ರಾಮಿ: ನಿಸರ್ಗ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆಯ ಬೆಳ್ಳಿ ಮಹೋತ್ಸವ ಹಾಗೂ 76ನೇ ಸ್ವಾತಂತ್ರ್ಯ ದಿನದ ನಿಮಿತ್ತ ಮಂಗಳವಾರ ಬೆಳಗ್ಗೆ 10.30ಕ್ಕೆ ಕದಂಬ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಸರಣಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಿಸರ್ಗ ಸಂಸ್ಥೆಯ ಕಾರ್ಯದರ್ಶಿ ಧೂಳಪ್ಪ ದ್ಯಾಮನಕರ್ ತಿಳಿಸಿದ್ದಾರೆ.

ಹಿರಿಯ ಸಾಹಿತಿ ಡಾ.ವಾಸುದೇವ ಸೇಡಂ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕದಂಬ ಕಾಲೇಜಿನ ಪ್ರಾಚಾರ್ಯ ದೇವಿಂದ್ರ ಗುಡೂರ ಅಧ್ಯಕ್ಷತೆ ವಹಿಸುವರು. ಜೇವರ್ಗಿ ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕ ಎಚ್.ಬಿ.ಪಾಟೀಲ್, ಸಮಾಜ ಸೇವಕ ಶಿವಯೋಗೆಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮಾಜಿ ಸೈನಿಕ ರೇಣುಕಾಚಾರ್ಯ ಸ್ಥಾವರಮಠ ಉಪನ್ಯಾಸ ನೀಡುವರು. ಕದಂಬ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶ್ರೀಶೈಲ ಕಣದಾಳ ಗೌರವ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.